ಜಿಲ್ಲೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಮೊಬೈಲ್ ನಂಬರ್ ಹ್ಯಾಕ್: ಈ ನಂಬರ್‌ಗೆ ಹಣ ವರ್ಗಾಯಿಸದಂತೆ ಡಿಸಿ ಮನವಿ

reportermng

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದೆ.

8590710748 ಮೊಬೈಲ್ ನಂಬರ್‌ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್‌ಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು. ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ. ಯಾರೂ ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಆ ನಂಬರ್‌ಗೆ ವರ್ಗಾಯಿಸದಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಮನವಿ ಮಾಡಿದ್ದಾರೆ.