ಜಿಲ್ಲೆ

ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರ ಸಂಖ್ಯಾಬಲ ಕುಗ್ಗಿಸಲು ಕೇಂದ್ರ ಸರ್ಕಾರ ಪ್ರಯತ್ನ; ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

Mangaluru - Prakash MC Manjeshwar

ಮಂಗಳೂರು: ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಮಂಗಳೂರು ವಿಮಾನ ನಿಲ್ದಾಣದ ಬಳಿ ಭಾನುವಾರ ಅವರು ಕೇಂದ್ರ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಮುಂದಾಗಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ಕೇಂದ್ರ ಸರ್ಕಾರ ಸಂಸತ್ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಲು ಮುಂದಾಗಿರುವುದನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ. ಇದು ಸರಿಯಲ್ಲ. ಇದರ ವಿರುದ್ಧ ಚುನಾವಣಾ ಆಯೋಗ, ನ್ಯಾಯಾಲಯಗಳ ಮೂಲಕ ನಾವು ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಮುಖಂಡ ಮಿಥುನ್ ರೈ ಮುಂತಾದವರು ಉಪಸ್ಥಿತರಿದ್ದರು.