ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ವಿಭಜನ್ ವಿಭೀಷಣ್ ಸ್ಮತಿ ದಿವಸ್ ಕಾರ್ಯಕ್ರಮದ ಅಂಗವಾಗಿ ಗುರುವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ದೇಶ ವಿಭಜನೆಯ ಕರಾಳ ದಿನದ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಿತು.
ಮಾಜಿ ಎಂಎಲ್‌ಸಿ ಬಾಲಕೃಷ್ಣ ಭಟ್ ದೇಶ ವಿಭಜನೆಯ ಕರಾಳ ದಿನದ ಬಗ್ಗೆ ಮಾತನಾಡಿದರು. ಸಂಸದ ಕ್ಯಾ.ಬ್ರಿಜೇಶ್ ಚೌಟ ಸ್ವಾತಂತ್ರಕ್ಕಾಗಿ ಬಲಿದಾನಗೈದ ವೀರ ಪುರುಷರನ್ನು ಸ್ಮರಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅಧ್ಯಕ್ಷತೆ ವಹಿಸಿದ್ದರು.
ಭರತನಾಟ್ಯದಲ್ಲಿ ಗಿನ್ನೆಸ್ ದಾಖಲೆ ನಿರ್ಮಿಸಿದ ರೇಮೊನಾ ಪಿರೇರಾ ಅವರನ್ನು ಸನ್ಮಾನಿಸಲಾಯಿತು.
ಕಿಯೊನಿಕ್ಸ್‌ನ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಜಿಲ್ಲಾ ಪ್ರಕೋಷ್ಠ ಸಂಯೋಜಕ ಸುಧೀರ್ ಶೆಟ್ಟಿ ಕಣ್ಣೂರು , ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ವೇತಾ ಕುಮಾರಿ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಕಾರ್ಯದರ್ಶಿ ಜೆಸ್ಸಿಲ್ ಡಿಸೋಜ, ಜಿಲ್ಲಾ ವಕ್ತಾರರಾದ ರಾಜ್‌ಗೋಪಾಲ್ ರೈ, ಅರುಣ್ ಜಿ.ಶೇಟ್ , ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ಜೋಗಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಡಾ. ಮಂಜುಳಾ ಅನಿಲ್ ರಾವ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ಟಿ.ಎ. ಶಾನವಾಜ್, ಉಪಸ್ಥಿತರಿದ್ದರು.
ರಾಜ್ಯ ಶಿಕ್ಷಣ ಪ್ರಕೋಷ್ಠ ಸಮಿತಿ ಸದಸ್ಯ ಮುರಳಿ ಹೊಸಮಜಲು ಸ್ವಾಗತಿಸಿ, ಕೈಗಾರಿಕಾ ಪ್ರಕೋಷ್ಠ ಜಿಲ್ಲಾ ಸಂಚಾಲಕ
ಸತೀಶ್ ಕರ್ಕೇರ ವಂದಿಸಿದರು. ಜಿಲ್ಲಾ ಉಪಾಧ್ಯಕ್ಷೆ ಪೂಜಾ ಪ್ರಶಾಂತ್ ಪೈ ಕಾರ್ಯಕ್ರಮ ನಿರೂಪಿಸಿದರು.