ಅಳವಂಡಿಯಲ್ಲಿ ಏರ್ಪಡಿಸಿದ್ದ ಸಿರಿಧಾನ್ಯ ಬಳಕೆ ಹಾಗೂ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಲಾಯಿತು. ಯೋಜನಾಧಿಕಾರಿ ಜಗದೀಶ ಕೆ.ಎಚ್, ಆರೋಗ್ಯ ನೀರಿಕ್ಷಣಾಧಿಕಾರಿ ರವೀಂದ್ರ ಕಮ್ಮಾರ, ಜ್ಞಾನವಿಕಾಸ ಕೇಂದ್ರ ಸಮನ್ವಯ ಅಧಿಕಾರಿ ಸುಧಾ ಇದ್ದರು. 
ಜಿಲ್ಲೆ

ಪ್ರತಿದಿನ ಪೌಷ್ಟಿಕ ಆಹಾರ ಸೇವಿಸಿ

Kopala - Desk - Eraveni

ಅಳವಂಡಿ: ಸಿರಿಧಾನ್ಯ ಬಳಕೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಲಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಯೋಜನಾಧಿಕಾರಿ ಕೆ.ಎಚ್.ಜಗದೀಶ ಹೇಳಿದರು.

ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಸಿರಿಧಾನ್ಯ ಬಳಕೆ ಹಾಗೂ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮದಲ್ಲಿ ಗುರುವಾರ ಮಾತನಾಡಿದರು. ಸಿರಿಧಾನ್ಯ ಬಳಕೆಯಿಂದ ಆರೋಗ್ಯ ವೃದ್ಧಿಯಾಗುತ್ತದೆ. ದಿನನಿತ್ಯ ಪೌಷ್ಟಿಕಾಂಶ ಆಹಾರ ಸೇವನೆ ಮಾಡಬೇಕು ಎಂದರು.

ಆರೋಗ್ಯ ನೀರಿಕ್ಷಣಾಧಿಕಾರಿ ರವೀಂದ್ರ ಕಮ್ಮಾರ ಮಾತನಾಡಿ, ರಕ್ತಹೀನತೆ ತಡೆಗಟ್ಟುವಲ್ಲಿ ಪೌಷ್ಟಿಕ ಆಹಾರ ಸೇವನೆ ಅತಿಮುಖ್ಯ. ಮೊಳಕೆ ಕಾಳುಗಳು, ತರಕಾರಿ, ಹಣ್ಣುಗಳನ್ನು ಸೇವಿಸಬೇಕು. ಮನೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜತೆಗೆ ಕಬ್ಬಿಣ ಅಂಶಯುಳ್ಳ ಆಹಾರ ಸೇವನೆ ಮಾಡಬೇಕೆಂದರು. ಜ್ಞಾನವಿಕಾಸ ಕೇಂದ್ರ ಸಮನ್ವಯ ಅಧಿಕಾರಿ ಸುಧಾ ಇದ್ದರು.