ಕುಶಾಲನಗರ:
ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮದಲಾಪುರದಲ್ಲಿರುವ ಮದಲಾಪುರ ಹಾಲು ಉತ್ಪಾದಕರ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ ಹಾಲು ಉತ್ಪಾದಕರ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಎಸ್. ಆರ್. ಸುನಿಲ್ ರಾವ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.
ಸಭೆಯಲ್ಲಿ ಹಾಸನ ಹಾಲು ಒಕ್ಕೂಟದ ವಿಸ್ತಾರಣಾಧಿಕಾರಿ ಬಿ. ಬಿ. ವೀಣಾ ಮಾತನಾಡಿ ಪಶುಪಾಲನೆ ಮತ್ತು ಅವುಗಳ ಸಂರಕ್ಷಣೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಸಂಘಕ್ಕೆ ಗುಣಮಟ್ಟದ ಹಾಲನ್ನು ಹಾಕುವ ಮೂಲಕ ಸಂಘದ ಅಭಿವೃದ್ಧಿಗೆ ಸದಸ್ಯರು ಸಹಕಾರಿಗಳಾಗಬೇಕು. ಒಕ್ಕೂಟದ ವತಿಯಿಂದ ದೊರಕುವ ಚಿಕಿತ್ಸಾ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಬಿ.ಆರ್. ತಮಯ್ಯ, ನಿರ್ದೇಶಕರಾದ ವೆಂಕಟ ನಾಯಕ್, ಹೆಚ್.ಆರ್. ಕೃಷ್ಣ, ವಿ.ಸಿ. ಸುರೇಶ್, ಬಿ. ಎ. ವಸಂತ, ಮಂಜಳಾ, ಗಾಯಿತ್ರಿ, ಚಂದ್ರಿಕ, ದೇವಿರಮ್ಮ, ಗಿರಿಜಾ, ಕಾರ್ಯದರ್ಶಿ ಎಂ.ಎಸ್. ಯೋಗೇಶ್ ಹಾಗೂ ಸಂಘದ ಸದಸ್ಯರು ಇದ್ದರು.