ಜಿಲ್ಲೆ

ಅಬಕಾರಿ ನಿಯಮ ಉಲ್ಲಂಘನೆ 90,443 ಲೀಟರ್ ಮದ್ಯ ವಶಕ್ಕೆ


ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಎ.3ರ ವರೆಗೆ ಜಿಲ್ಲೆಯಲ್ಲಿ 1,95,47,179 ರೂ. ಮೌಲ್ಯದ 90,443 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.


ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 278 ಎಫ್ ಐ ಆರ್ ದಾಖಲಾಗಿದೆ. ದೂರವಾಣಿ ಮೂಲಕ ಸಾರ್ವಜನಿಕರಿಂದ ಮಾಹಿತಿ, ಕೋರಿಕೆಗಳನ್ನು ಸ್ವೀಕರಿಸಿ, ವಿಲೇವಾರಿ ಮಾಡಲಾಗಿದೆ.


ಸಿ-ವಿಸಿಲ್ ಆಪ್ ಮೂಲಕ ಇಲ್ಲಿಯವರೆಗೆ 59 ದೂರುಗಳು ಸ್ವೀಕೃತಗೊಂಡಿದ್ದು ಎಲ್ಲಾ ದೂರುಗಳನ್ನು ವಿಲೇವಾರಿ ಮಾಡಲಾದೆ. ಎನ್.ಜಿ.ಆರ್.ಎಸ್ ಪೋರ್ಟಲ್ (ರಾಷ್ಟ್ರೀಯ ಕುಂದುಕೊರತೆಗಳ ಪರಿಹಾರ ವ್ಯವಸ್ಥೆ) ಮೂಲಕ ಜಿಲ್ಲೆಯಲ್ಲಿ ಒಟ್ಟು 92 ದೂರುಗಳು ಸ್ವೀಕೃತಗೊಂಡಿದ್ದು, 90 ದೂರುಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.