Transparent umbrella under heavy rain against water drops splash background. Rainy weather concept. 
ಜಿಲ್ಲೆ

ಗುಡುಗು ಸಹಿತ ಉತ್ತಮ ಮಳೆ ಸಾಧ್ಯತೆ

ಹರೀಶ ಎಂ.

ಮಂಗಳೂರು: ದ.ಕ, ಉಡುಪಿ ಸೇರಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಉತ್ತಮ ಬಿಸಿಲಿನ ವಾತಾವರಣವಿದ್ದು, ಸಂಜೆ ಮೋಡಕವಿದ ವಾತಾವರಣ ಇತ್ತು. ರಾಷ್ಟ್ರೀಯ ಹವಾಮಾನ ಮನ್ಸೂಚನಾ ಕೇಂದ್ರದ ಮಾಹಿತಿಯಂತೆ ಮುಂದಿನ 2 ದಿನ ಕರಾವಳಿಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ದ.ಕ ಜಿಲ್ಲೆಯಲ್ಲಿ ಬುಧವಾರ ಸರಾಸರಿ 38.1 ಡಿಗ್ರಿ ಗರಿಷ್ಠ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ಸಂಜೆ 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಠಾಂಶ ದಾಖಲಾಗಿರುವುದರಿಂದ ರಾತ್ರಿ ಒಣ ಚಳಿ ಮುಂದುವರಿದಿತ್ತು. ದ.ಕ, ಉಡುಪಿ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಸರಾಸರಿ 38.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಸಂಜೆ ಸುಬ್ರಹ್ಮಣ್ಯ, ಅರಂತೋಡು, ಸುಳ್ಯ ಭಾಗದಲ್ಲಿ ಮಳೆಯಾಗಿದೆ.

ರಾತ್ರಿ ಮಳೆ ಕಾಡು ಹಾಗು ಪಶ್ಚಿಮಘಟ್ಟದ ಹಲವಡೆ ಹೆಚ್ಚಿನ ಪ್ರಮಾಣದ ಮೋಡಕವಿದ ವಾತಾವರಣ ಕಂಡುಬಂದಿದೆ.*ಆಲಿಕಲ್ಲು ಮಳೆ: ಅರಬ್ಬಿ ಸಮುದ್ರದಲ್ಲಿ ಗಾಳಿಯ ಪ್ರಮಾಣ ತುಸು ಹೆಚ್ಚಾದ ಕಾರಣ ಉಡುಪಿ, ಕಾರವಾರ ಬೀಚ್ ವ್ಯಾಪ್ತಿಯಲ್ಲೂ ಕಡಲಬ್ಬರ ಹೆಚ್ಚಳಗೊಳ್ಳುತ್ತಿದೆ. ಮುಂದಿನ 1-2 ದಿನ ರಾತ್ರಿ ವೇಳೆ ಚಳಿಯ ತೀವ್ರತೆ ಸಾಧಾರಣಕ್ಕಿಂತ ತುಸು ಹೆಚ್ಚಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ಅಲೆ ಜತೆಗೆ ಆಲಿಕಲ್ಲು ಮಳೆ ಸಹಿತ ಭಾರಿ ಮಳೆ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ಹವಾಮಾನ ಮನ್ಸೂಚನಾ ಕೇಂದ್ರ ಮಾಹಿತಿ ನೀಡಿದೆ.