ಜಿಲ್ಲೆ

ದ.ಕ. ಜಿಲ್ಲಾ ಪಂಚಾಯಿತಿ ಸಿಇಒ ವರ್ಗಾವಣೆ

Dakshina Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ.ಸೆಲ್ವಮಣಿ ಆರ್. ವರ್ಗಾವಣೆಯಾಗಿದ್ದಾರೆ.

ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ವರ್ಗಾಯಿಸಲಾಗಿದ್ದು, ಕೋಲಾರ ಜಿಲ್ಲಾಧಿಕಾರಿಯಾಗಿ ಅವರು ಕಾರ್ಯ ನಿರ್ವಹಿಸಲಿದ್ದಾರೆ.

ಚಿಕ್ಕಮಗಳೂರು ಅಪರ ಜಿಲ್ಲಾಧಿಕಾರಿ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ವರ್ಗಾಯಿಸಲಾಗಿದೆ.

ಕುಮಾರ್ ಈ ಹಿಂದೆ ದಕ್ಷಿಣ ಕನ್ನಡ, ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.