ಜಿಲ್ಲೆ

ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಂ.ರಾ. ಯೋಗ ದಿನಾಚರಣೆ

ಮಂಗಳೂರು: ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ, ಆಯುಷ್ ಇಲಾಖೆ, ನೆಹರು ಯುವ ಕೇಂದ್ರ ಹಾಗೂ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಯೋಗದಿನಾಚರಣೆಗೆ ಶಾಸಕರಾದ ವೇದವ್ಯಾಸ ಕಾಮತ್ ಚಾಲನೆ ನೀಡಿದರು.

ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಅಲೆಮಾರಿ/ಅರೆ ಅಲೆಮಾರಿ‌ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ,
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ
ಆಯುಷ್ ಅಧಿಕಾರಿ ಡಾ.ಮಹಮ್ಮದ್ ಇಕ್ಬಾಲ್, ನೆಹರೂ ಯುವ ಕೇಂದ್ರದ ರಘುವೀರ್ ಸೂಟರ್ ಪೇಟೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಪ್ರದೀಪ್ ಡಿಸೋಜಾ ಹಾಗೂ ಇತರೆ ಗಣ್ಯರು ಭಾಗವಹಿಸಿದ್ದರು.
ಯೋಗ ಗುರುಗಳಾದ ಗೋಪಾಲ ಕೃಷ್ಣ ದೇಲಂಪಾಡಿ ಅವರು ಯೋಗಾಸನದ ವಿವಿಧ ಭಂಗಿಗಳನ್ನು ವಿವರಿಸುತ್ತಾ, ಯೋಗಾಭ್ಯಾಸ ಮಾಡಿಸಿದರು.

ಆಯುಷ್ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ ಹಲವು ಯೋಗ ಸಂಘಟನೆಗಳ ಯುವಕ-ಯುವತಿಯರು, ಯೋಗ ಪ್ರಿಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.