ಜಿಲ್ಲೆ

ದ.ಕ.ದಲ್ಲಿ 257 ಮದ್ಯ ಅಕ್ರಮ ಸಾಗಾಟ ಪ್ರಕರಣ

ಮಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ದಿನದಿಂದ ಏ.2ರವರೆಗೆ ದ.ಕ.ಜಿಲ್ಲೆಯಲ್ಲಿ 41,93,093 ರೂ. ಮೌಲ್ಯದ 12,849 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 8,69,950 ರೂ.ಮೌಲ್ಯದ 15.5 ಕೆ.ಜಿ.ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.

ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರ ಸೇರಿದಂತೆ ಒಟ್ಟು 257 ಎಫ್‌ಐಆರ್ ಪ್ರಕರಣ ದಾಖಲಾಗಿದೆ. ದೂರವಾಣಿ ಮೂಲಕ (1950)149 ಸಾರ್ವಜನಿಕರಿಂದ ಮಾಹಿತಿ ಕೋರಿಕೆಗಳನ್ನು ಸ್ವೀಕರಿಸಿ ವಿಲೇವಾರಿ ಮಾಡಲಾಗಿದೆ. ಸಿ-ವಿಸಿಲ್ ಆ್ಯಪ್ ಮೂಲಕ ಇದುವರೆಗೆ 54 ದೂರುಗಳು ಸ್ವೀಕೃತಗೊಂಡಿದ್ದು ಎಲ್ಲವನ್ನೂ ವಿಲೇವಾರಿ ಮಾಡಲಾಗಿದೆ.

ಎನ್‌ಜಿಆರ್‌ಎಸ್ ಪೋರ್ಟಲ್ ಮೂಲಕ ಜಿಲ್ಲೆಯಲ್ಲಿ ಒಟ್ಟು 85 ದೂರುಗಳು ಸ್ವೀಕೃತಗೊಂಡಿದ್ದು, 84 ದೂರುಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಚುನಾವಣೆಯ ವಾದರಿ ನೀತಿ ಸಂಹಿತೆ ಉಲ್ಲಂಸಿ ಸಾಗಾಟ ಮಾಡುತ್ತಿದ್ದ ಮದ್ಯವನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ. 11,600 ರೂ. ಮೌಲ್ಯದ 62.690 ಲೀ. ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.