ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ದೇವಳದಲ್ಲಿ ಸ್ವಚ್ಛತಾ ಕಾರ್ಯ.
- ಸ್ವ-ಸಹಾಯ ಸಂಘ ಸದಸ್ಯರಿಂದ ಶ್ರಮದಾನ
- ಧರ್ಮಸ್ಥಳ ಯೋಜನೆ ಸಹಭಾಗಿತ್ವ
ಬೆಳ್ತಂಗಡಿ: ಚತುರ್ವಿಧ ದಾನಗಳಿಗೆ ಹೆಸರುವಾಸಿಯಾದ ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಚ್ಛತೆ ಸಂಕೇತವೂ ಹೌದು. ಸ್ವಚ್ಛತೆಯಿದ್ದಲ್ಲಿ ಭಗವಂತನಿದ್ದಾನೆ ಎಂಬಂತೆ ಶ್ರೀ ಕ್ಷೇತ್ರದಲ್ಲಿ ಅನಾದಿಕಾಲದಿಂದಲೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬರಲಾಗಿದೆ. ಪರಿಣಾಮವಾಗಿ ರಾಷ್ಟ್ರಮಟ್ಟದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಚ್ಛ ಧಾರ್ಮಿಕ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.
ಸ್ವಚ್ಛತೆಗೆ ಆದ್ಯತೆ
ಧಾರ್ಮಿಕ ಕೇಂದ್ರಗಳ ಪಾವಿತ್ರೃ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ರಾಜಾದ್ಯಂತ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಗಿದೆ.