ಬೆಳ್ತಂಗಡಿ ನಗರದ ಕೆಇಬಿ-ರೆಂಕೆದಗುತ್ತು-ಮಲ್ಲೊಟ್ಟು ಸಂರ್ಕಿಸುವ ರಸ್ತೆ ವಿಸ್ತರಣೆ, ಡಾಂಬರು ಕಾಮಗಾರಿ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಶಿಲಾನ್ಯಾಸ ನೆರವೇರಿಸಿದರು. 
ದಕ್ಷಿಣ ಕನ್ನಡ

ಅಭಿವೃದ್ಧಿ ಕಾರ್ಯಕ್ಕೆ ರಾಜ್ಯಸಭಾ ನಿಧಿ ಬಳಕೆ : ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿಕೆ

ಸೌಮ್ಯ ಆರ್

ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ತಾಲೂಕಿನ ಕೆಲವು ಶಾಲೆಗಳಿಗೆ ಸ್ಮಾರ್ಟ್‌ಕ್ಲಾಸ್‌ಗೆ ರಾಜ್ಯಸಭಾ ನಿಧಿ ಬಳಸಲಾಗಿದೆ. ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾವಿರಾರು ಕುಟುಂಬಗಳಿಗೆ ಬೆಳಕು ಬಂದರೆ, ಸಿರಿ ಸಂಸ್ಥೆಯಿಂದ ಸಾವಿರಾರು ಮಂದಿಗೆ ಉದ್ಯೋಗ ದೊರಕಿದೆ. ಮುಂದೆಯೂ ಇನ್ನಷ್ಟು ಉತ್ಪನ್ನಗಳನ್ನು ತಯಾರಿಸಿ 3 ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗ ನೀಡಲಾಗುವುದು.

ಡಾ.ಹೆಗ್ಗಡೆಯವರ ಕಾರ್ಯಕ್ಕೆ ರಾಷ್ಟ್ರಪತಿಯವರಿಂದ ಶ್ಲಾಘನೆ ಲಭಿಸಿದೆ. ಬೆಳ್ತಂಗಡಿ- ಹುಣ್ಸೆಕಟ್ಟೆ ರಸ್ತೆ ವಿಸ್ತರಣೆ ಹಾಗೂ ಅಭಿವೃದ್ಧಿಗೆ 2 ಕೋಟಿ ರೂ., ಧರ್ಮಸ್ಥಳದ ಅಶೋಕನಗರದಲ್ಲಿ ರಸ್ತೆ, ಮೂಲಸೌಕರ್ಯಕ್ಕೆ 2.41 ಕೋಟಿ ರೂ., 140ಕ್ಕೂ ಅಧಿಕ ಶಾಲೆಗಳಿಗೆ ಸ್ಮಾರ್ಟ್‌ಕ್ಲಾಸ್‌ಗೆ 1.83 ಕೋಟಿ ರೂ. ಸಹಿತ ಈವರೆಗೆ 16.74 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ.