ಬಂಟ್ವಾಳ: ಬ್ರಹ್ಮಶ್ರೀ ನಾರಾಯಣಗುರುಗಳು ಅಜ್ಞಾನ, ಅಸಮಾನತೆ ಹಾಗೂ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡಿ, ಜ್ಞಾನ, ಸಮಾನತೆ ಮತ್ತು ಮಾನವೀಯತೆಯ ಬೆಳಕನ್ನು ಸಮಾಜಕ್ಕೆ ನೀಡಿದ ಮನುಕುಲದ ದಿವ್ಯಜ್ಯೋತಿ ಎಂದು ಬರಹಗಾರ್ತಿ ರೇಣುಕಾ ಕಣಿಯೂರು ಹೇಳಿದರು.
ಸಜಿಪ ದೇರಾಜೆಯ ಗಾಯತ್ರಿ ದಿನೇಶ್ ಪೂಜಾರಿ ಅವರ ಮನೆಯಲ್ಲಿ ಮಂಗಳವಾರ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ 76ನೇ ಮಾಲಿಕೆಯಲ್ಲಿ ಗುರುಸಂದೇಶ ನೀಡಿದರು.
ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ಕಿರಣ್‌ರಾಜ್ ಪೂಂಜರೆಕೋಡಿ, ಉಪಾಧ್ಯಕ್ಷರಾದ ನಿಕೇಶ್ ಕೋಟ್ಯಾನ್, ಹರೀಶ್ ಅಜೆಕಲ, ನಿರ್ದೇಶಕರಾದ ಶೈಲೇಶ್ ಕುಚ್ಚಿಗುಡ್ಡೆ, ಸುನೀತಾ ಮಾರ್ನಬೈಲು, ನವೀನ್ ಪೂಜಾರಿ ಕಾರಜೆ, ಸದಸ್ಯರಾದ ಪ್ರಶಾಂತ್ ಏರಮಲೆ, ಯಶೋಧರ ಕಡಂಬಳಿಕೆ, ಯತೀಶ್ ಬೊಳ್ಳಾಯಿ, ನಾರಾಯಣ ಪಲ್ಲಿಕಂಡ, ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ, ದಿನೇಶ್ ಸುವರ್ಣ, ನಾಗೇಶ್ ಪೊನ್ನೋಡಿ, ಶಿವಾನಂದ ಎಂ., ರಾಜೇಶ್ ಸುವರ್ಣ, ಅರುಣ್ ಮಹಾಕಾಳಿಬೆಟ್ಟು, ದಿನೇಶ್ ಪೂಜಾರಿ ಉಪಸ್ಥಿತರಿದ್ದರು.
ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಮಹೇಶ್ ಬೊಳ್ಳಾಯಿ ವಂದಿಸಿದರು. ಘಟಕದ ಕೋಶಾಧಿಕಾರಿ ಪ್ರಜಿತ್ ಅಮೀನ್ ಏರಮಲೆ ಕಾರ್ಯಕ್ರಮ ನಿರೂಪಿಸಿದರು.