ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ನಡೆಸುವುದಕ್ಕೆ ಸೀಮಿತವಾಗಿಲ್ಲ, ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಹೊಣೆಗಾರಿಕೆ, ಶಿಸ್ತು ಮತ್ತು ನಾಯಕತ್ವ ಬೆಳೆಸುವ ವೇದಿಕೆ ಎಂದು ಮಾಜಿ ಸಚಿವ, ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಕೆ.ಅಭಯಚಂದ್ರ ಜೈನ್ ಹೇಳಿದರು.
ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ದಕ್ಷಿಣ ಕನ್ನಡ ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಬೋರುಗುಡ್ಡೆಯಲ್ಲಿ ಉದ್ಘಾಟಿಸಿ ಮಾತನಾಡಿದರು.
ಎಕ್ಸಲೆಂಟ್ ಮೂಡುಬಿದಿರೆ ಆಡಳಿತ ನಿರ್ದೇಶಕ ಡಾ.ಬಿ.ಪಿ.ಸಂಪತ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಚಾಮುಂಡಿ ದೇವಸ್ಥಾನ ಆನುವಂಶಿಕ ಆಡಳಿತ ಮುಖ್ಯಸ್ಥ ಮಹಾವೀರ ಹೆಗ್ಡೆ ಬಡಕೋಡಿಗುತ್ತು, ಪಿಡಬ್ಲು ್ಯಡಿ ಗುತ್ತಿಗೆದಾರ ಮಧ್ವರಾಜ್ ಜೈನ್, ನೆಲ್ಲಿಕಾರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಉದಯ ಪೂಜಾರಿ, ಸತ್ಯಪುರ ಸತ್ಯನಾರಾಯಣ ದೇವಸ್ಥಾನ ಅಧ್ಯಕ್ಷ ಜಯಂತ ಹೆಗ್ಡೆ, ಎಸ್‌ಡಿಎಂಸಿ ಅಧ್ಯಕ್ಷ ಸತೀಶ್, ಮುಖ್ಯಶಿಕ್ಷಕಿ ಸುಜಾತ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣ್ ಕೆ., ಸುಂದರ ಹೆಗ್ಡೆ, ಪಿಜಿನ ಪೂಜಾರಿ, ವಿದ್ಯಾರ್ಥಿ ನಾಯಕ ಅದಿತ್, ಶಿಬಿರದ ನಾಯಕರಾದ ನಂದನ್ ಹಾಗೂ ಹಿಮಾನಿ ಉಪಸ್ಥಿತರಿದ್ದರು.
ಶಿಬಿರಾಧಿಕಾರಿ ಅಶೋಕ್ ಪಿ. ಸ್ವಾಗತಿಸಿದರು. ಸಹಶಿಬಿರಾಧಿಕಾರಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರಶಾಂತ ಶೆಟ್ಟಿ ವಂದಿಸಿದರು. ಉಪನ್ಯಾಸಕಿ ಯಶಸ್ವಿನಿ ನಿರೂಪಿಸಿದರು.
ಎನ್‌ಎಸ್‌ಎಸ್ ವಿದ್ಯಾರ್ಥಿಗಳನ್ನು ಸಮಾಜದ ನೈಜ ಬದುಕಿನತ್ತ ಕರೆದೊಯ್ಯುವ ಶೈಕ್ಷಣಿಕ ಪ್ರಕ್ರಿಯೆಯಾಗಿದ್ದು, ಶ್ರಮ, ಸಹಬಾಳ್ವೆ, ಪರಿಸರ ಕಾಳಜಿ ಹಾಗೂ ಸಾಮಾಜಿಕ ಜವಾಬ್ದಾರಿಯ ಅರಿವಿಗೆ ಶಿಬಿರ ಉತ್ತಮ ಅವಕಾಶವಾಗಿದೆ.ಡಾ.ಬಿ.ಪಿ.ಸಂಪತ್ ಕುಮಾರ್, ಎಕ್ಸಲೆಂಟ್ ಮೂಡುಬಿದಿರೆ ಆಡಳಿತ ನಿರ್ದೇಶಕ