ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಕಲ್ಲಡ್ಕದ ಕಲಾನಿಕೇತನ ಸಂಸ್ಥೆಯ ರಜತ ಕಲಾಯಾನದ ಸಮಾರೋಪ ಸಮಾರಂಭದಲ್ಲಿ ಎಡನೀರು ಸ್ವಾಮೀಜಿ ಆಶೀರ್ವಚನ ನೀಡಿದರು. ಪ್ರಮುಖರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ, ಡಾ.ನೀಲೇಶ್ ಪಿ.ಕೊರ್ಡೆ, ನಯನಾ ವಿ.ರೈ ಉಪಸ್ಥಿತರಿದ್ದರು. 
ದಕ್ಷಿಣ ಕನ್ನಡ

ಗುರು-ಶಿಷ್ಯ ಪರಂಪರೆ ಬೆಳೆಸುವ ಪ್ರಬಲ ಮಾಧ್ಯಮ

ರಜತ ಕಲಾಯಾನ ಸಮಾರೋಪ

ಬಂಟ್ವಾಳ: ಭರತನಾಟ್ಯ ಕೇವಲ ನೃತ್ಯಕಲೆಯಲ್ಲ, ಸಂಸ್ಕಾರ, ಶಿಸ್ತು ಹಾಗೂ ಗುರು-ಶಿಷ್ಯ ಪರಂಪರೆ ಉಳಿಸಿ ಬೆಳೆಸುವ ಪ್ರಬಲ ಮಾಧ್ಯಮವಾಗಿದೆ. ಗುರು-ಹಿರಿಯರನ್ನು ಗೌರವಿಸುವ, ಸಂಸ್ಕಾರ ಬೆಳೆಸುವ ಜತೆಗೆ, ದೈಹಿಕ ಆರೋಗ್ಯ ಮತ್ತು ಮಾನಸಿಕ ಸ್ಥೈರ್ಯ ವೃದ್ಧಿಸುವ ಶಕ್ತಿ ಈ ಕಲೆಯಲ್ಲಿದೆ ಎಂದು ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು.

ಶುಕ್ರವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಕಲ್ಲಡ್ಕದ ಕಲಾನಿಕೇತನ ಸಂಸ್ಥೆಯ ರಜತ ಕಲಾಯಾನದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕ ಡಾ.ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ, ಇತರ ದೇಶಗಳಲ್ಲಿಯೂ ಹಾಡು ಮತ್ತು ನೃತ್ಯಗಳಿದ್ದರೂ ಭಾರತೀಯ ಭರತನಾಟ್ಯ ಹೃದಯಕ್ಕೆ ವಿಶಿಷ್ಟ ಕಂಪನ ನೀಡುವುದರ ಜತೆಗೆ ಮಾನಸಿಕ ಶಕ್ತಿಯನ್ನೂ ತುಂಬುತ್ತದೆ ಎಂದರು.

ಕಲಾನಿಕೇತನದಲ್ಲಿ ತರಬೇತಿ ಪಡೆದು ವಿದ್ವತ್ ಪದವಿ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಿರೋಡಾದ ಗೋಮಂತಕ್ ಆಯುರ್ವೇದ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲ ಡಾ.ನೀಲೇಶ್ ಪಿ.ಕೊರ್ಡೆ, ಪುತ್ತೂರಿನ ವಿಶ್ವ ಕಲಾನಿಕೇತನ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್ ಆ್ಯಂಡ್ ಕಲ್ಚರ್ ಸಂಸ್ಥೆ ನಿರ್ದೇಶಕಿ ನಯನಾ ವಿ.ರೈ ಉಪಸ್ಥಿತರಿದ್ದರು.

ಲಕ್ಷ್ಮಣ್ ಅಗ್ರಬೈಲು ವಂದಿಸಿದರು. ಸಂಸ್ಥೆ ನಿರ್ದೇಶಕಿ ಹಾಗೂ ಗುರು ವಿದುಷಿ ವಿದ್ಯಾ ಮನೋಜ್ ಸ್ವಾಗತಿಸಿದರು. ವಿದುಷಿ ಶ್ರೀದೇವಿ ನಿರೂಪಿಸಿದರು.