ಸಾಂದರ್ಭಿಕ ಚಿತ್ರ 
ದಕ್ಷಿಣ ಕನ್ನಡ

ವೆನ್‌ಲಾಕ್ ಆಸ್ಪತ್ರೆಯಿಂದ ವಿಚಾರಣಾ ಕೈದಿ ಪರಾರಿ

ಮಂಗಳೂರು : ವೆನ್‌ಲಾಕ್ ಆಸ್ಪತ್ರೆಯ ಬಂಧಿ ಕೊಠಡಿಯಿಂದ ಪೋಕ್ಸೋ ಪ್ರಕರಣದ ವಿಚಾರಣಾ ಕೈದಿಯೊಬ್ಬ ಪೊಲೀಸರ ಕಣ್ತಪ್ಪಿಸಿ ಭಾನುವಾರ ಬೆಳಗ್ಗೆ ಪರಾರಿಯಾಗಿದ್ದಾನೆ.

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣದ ಆರೋಪಿ ರೋಷನ್ ಫನಾರ್ಂಡಿಸ್ (36) ಎಂಬಾತನನ್ನು ಚಿಕಿತ್ಸೆಗಾಗಿ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಬಂಧಿ ಕೊಠಡಿಗೆ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸರ ಕಣ್ತಪ್ಪಿಸಿ ಆತ ಪರಾರಿಯಾಗಿದ್ದಾನೆ.
ಪ್ರಸ್ತುತ ಮೂಡಬಿದ್ರೆ ತಾಲೂಕಿನ ವಿಶಾಲನಗರದ ಹೆಚ್.ಪಿ. ಪೆಟ್ರೋಲ್ ಬಂಕ್ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ.
ಈತನ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿತ್ತು. ಆತನ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.