ಹನೀಫ್ 
ದಕ್ಷಿಣ ಕನ್ನಡ

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಆರೋಪಿಗೆ ನ್ಯಾಯಾಂಗ ಬಂಧನ

ಬಂಟ್ವಾಳ: ಹದಿನೇಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ, ಬಂಟ್ವಾಳ ತಲಪಾಡಿ ನಿವಾಸಿ ಹನೀಫ್ ಯಾನೆ ಕೊಕ್ಕಡ ಹನೀಫ್ (57) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಮೂಡುಬಿದಿರೆಯ ಶಿರ್ತಾಡಿಯಲ್ಲಿ ಬಂಧಿಸಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಿವಿಧ ಪ್ರಕರಣದಲ್ಲಿ ಆರೋಪಿಯಾಗಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.