ಕಡಬ: ತಾಲೂಕಿನ ಕುಂತೂರು ಗ್ರಾಮದ ಪದವು ಮುರತ ಚಡವು ಎಂಬಲ್ಲಿ ಆಟೋ ಬರೆಗೆ ಗುದ್ದಿ ಗಂಭೀರವಾಗಿ ಗಾಯಗೊಂಡಿದ್ದ ಪ್ರಯಾಣಿಕರ ಪೈಕಿ ಓರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ದರ್ಖಾಸು ನಿವಾಸಿ ಲಕ್ಷ್ಮಣ್(34) ಮೃತರು. ನ.10ರಂದು ರಾತ್ರಿ ಕಡಬದಿಂದ ಸವಣೂರಿಗೆ ಗ್ಯಾಸ್ ತುಂಬಿಸಲು ತೆರಳುತ್ತಿದ್ದ ಆಟೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದು ಎದುರಿನ ಬರೆಗೆ ಅಪ್ಪಳಿಸಿತ್ತು. ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಲಕ್ಷ್ಮಣ್ ಅವರನ್ನು ಪುತ್ತೂರಿನಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ತಾಯಿ, ಪತ್ನಿ, ನಾಲ್ಕು ವರ್ಷದ ಪುತ್ರಿಯನ್ನು ಅಗಲಿದ್ದಾರೆ. ಬೆಳ್ಳಾರೆ ಮೂಲದ ಮತ್ತೋರ್ವ ಪ್ರಯಾಣಿಕ ಭರತ್(28) ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.