ದಿನೇಶ್ ಶೆಟ್ಟಿ  
ದಕ್ಷಿಣ ಕನ್ನಡ

ಭೂಗತ ಪಾತಕಿ ಕಲಿ ಯೋಗಿಶನ ಸಹಚರ ಬಂಧನ


2019ರಲ್ಲಿ ಕಾವೂರು ಠಾಣೆಯಲ್ಲಿ ದಾಖಲಾಗಿದ್ದ ಅಪಹರಣ ಪ್ರಕರಣ, 2022ರಲ್ಲಿ ಬಂದರು ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣ ಮತ್ತು 2023ರಲ್ಲಿ ದಾಖಲಾಗಿದ್ದ ಸುಲಿಗೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಕಳೆದ ಒಂದೂವರೆ ವರ್ಷದಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಮಂಗಳವಾರ ಉತ್ತರ ಉಪ ವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

2009ರಲ್ಲಿ ಭೂಗತ ಲೋಕದ ಪಾತಕಿಗಳಾದ ರವಿ ಪೂಜಾರಿ ಮತ್ತು ಕಲಿ ಯೊಗೀಶನಿಂದ ಸುಪಾರಿ ಪಡೆದು ವಕೀಲ ಖಾಸಿಂ ನೌಷಾದ್ ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿ ಸಾಬೀತಾದ ಹಿನ್ನೆಲೆಯಲ್ಲಿ ದಿನೇಶ ಹಾಗೂ ಇತರ ಇಬ್ಬರಿಗೆ ಜೀವಾವಧಿ ಶಿಕ್ಷೆಯಾಗಿತ್ತು. 11 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ಅನುಭವಿಸಿದ ಅನಂತರ ಹೈಕೋರ್ಟ್ ನಲ್ಲಿ ಅಪೀಲು ಸಲ್ಲಿಸಿ, 2019ರ ಡಿಸೆಂಬರ್ ನಲ್ಲಿ ಬಿಡುಗಡೆಗೊಂಡಿದ್ದ