ಮಂಗಳೂರು: ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಿರಾತ್ ಸ್ಪರ್ಧೆಯ ವಿಡಿಯೋ ಸಾಮಾಜಿಕ ಜಾಲತಾಣವಾದ ಉದಯವಾಣಿ ಫೇಸ್ ಬುಕ್ ಪುಟದಲ್ಲಿ ಪ್ರಸಾರವಾಗುತ್ತಿದ್ದಾಗ ಪ್ರಚೋದನಕಾರಿಯಾಗಿ ಕಮೆಂಟ್ ಹಾಕಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಂಜೇಶ್ವರದ ಗಣೇಶ್ ಪ್ರಸಾದ್ (41) ಬಂಧಿತ ಆರೋಪಿ. ಈತ ತನ್ನ ಫೇಸ್‌ಬುಕ್ ಖಾತೆಯಲ್ಲಿ ‘ಮಕ್ಕಳ ತಲೆಯನ್ನು ಬ್ರೈನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ’ ಎಂದು ಪ್ರಚೋದನಕಾರಿಯಾಗಿ ಕಮೆಂಟ್ ಹಾಕಿದ್ದ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು.