ನೆಲ್ಯಾಡಿ- ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2038ನೇ ಮದ್ಯವರ್ಜನ ಶಿಬಿರದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿದರು. ಪ್ರಮುಖರಾದ ವರ್ಗೀಸ್ ಕೈಪನಡ್ಕ, ಕೇಶವ ಅಮೈ, ವಿವೇಕ್ ವಿನ್ಸೆಂಟ್ ಪಾಯಸ್, ಪದ್ಮನಾಭ ಶೆಟ್ಟಿ ಮತ್ತಿತರರಿದ್ದರು.
ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ವರ್ಗೀಸ್ ಕೈಪನಡ್ಕ ಮಾತನಾಡಿದರು. ಉದ್ಯಮಿ ಕೇಶವ ಅಮೈ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ. ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ನೆಲ್ಯಾಡಿ-ಕೌಕ್ರಾಡಿ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಶ್ರೀಧರ ಗೋರೆ, ಶಿಬಿರ ವೈದ್ಯಾಧಿಕಾರಿ ಡಾ.ಮೋಹನ್‌ದಾಸ್ ಗೌಡ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ದ.ಕ.-2 ನಿರ್ದೇಶಕ ಬಾಬು ನಾಯ್ಕ, ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್‌ಕುಮಾರ್ ಉಪಸ್ಥಿತರಿದ್ದರು.
ಸನ್ಮಾನ, ಸವಲತ್ತು ವಿತರಣೆ
ನೆಲ್ಯಾಡಿ- ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ವತಿಯಿಂದ ಉದ್ಯಮಿ ಕೇಶವ ಅಮೈ ಅವರನ್ನು ಸನ್ಮಾನಿಸಲಾಯಿತು. ಉಪನ್ಯಾಸಕ ಚೇತನ್ ಆನೆಗುಂಡಿ ಪರಿಚಯಿಸಿದರು. ಶೌರ್ಯ ವಿಪತ್ತು ನಿರ್ವಹಣಾ ನೆಲ್ಯಾಡಿ ಘಟಕದ ಸದಸ್ಯರಿಗೆ ಬ್ಯಾಗ್ ವಿತರಿಸಲಾಯಿತು. ಯೋಜನೆಯ ಜನಮಂಗಳ ಕಾರ್ಯಕ್ರಮದಡಿ ಸುರೇಂದ್ರ ಪಡುಬೆಟ್ಟು ಅವರಿಗೆ ವಾಕರ್, ತಿಮ್ಮಪ್ಪ ರೈ ಪಿಜಕ್ಕಳ ಅವರಿಗೆ ವಾಟರ್ ಬೆಡ್, ಅಕ್ಕಮ್ಮ ಅಬ್ರಹಾಂ ಅವರಿಗೆ ವೀಲ್ ಚೇರ್ ವಿತರಿಸಲಾಯಿತು.