ಬೆಳ್ತಂಗಡಿ: ಕರ್ಣಾಟಕ ಬ್ಯಾಂಕ್ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗೆ ಫೋರ್ಸ್ ಮೋಟಾರ್ಸ್ ಲಿಮಿಟೆಡ್ ಕಂಪನಿಯ ತೂಫಾನ್ ಮಾದರಿಯ ಆಂಬುಲೆನ್ಸ್ ಕೊಡುಗೆಯಾಗಿ ನೀಡಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಎಂ.ಭಟ್ ಕ್ಷೇತ್ರದ ಧರ್ವಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ.ಸುರೇಂದ್ರ ಕುಮಾರ್, ಕಾರ್ಯದರ್ಶಿಗಳಾದ ಡಿ.ಹಷೇರ್ಂದ್ರ ಕುಮಾರ್, ಡಾ.ಸತೀಶ್ಚಂದ್ರ ಎಸ್. ಹಾಗೂ ಯೋಜನಾ ನಿರ್ದೇಶಕ ಡಿ.ಶ್ರೇಯಸ್ ಕುಮಾರ್ ಸಮ್ಮುಖದಲ್ಲಿ ಆಂಬುಲೆನ್ಸ್ ಹಸ್ತಾಂತರಿಸಿದರು.
ಆಂಬುಲೆನ್ಸನ್ನು ಉಡುಪಿಯ ಎಸ್ಡಿಎಂ ಆಯುರ್ವೇದ ಆಸ್ಪತ್ರೆಯ ಬಳಕೆಗೆ ನೀಡಲಾಯಿತು. ರಾಘವೇಂದ್ರ ಎಂ. ಭಟ್ ಅವರನ್ನು ಡಾ.ಡಿ.ವೀರೇಂದ್ರ ಹೆಗ್ಗಡೆ ಗೌರವಿಸಿದರು.
ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಹಣಕಾಸು ಅಧಿಕಾರಿ ಅರವಿಂದ್ ಪಿ., ವಾಹನಗಳ ಸಂಯೋಜಕ ನಿಶಿತ್ ಕುಮಾರ್, ಎಸ್ಡಿಎಂ ಆಯುರ್ವೇದ ಆಸ್ಪತ್ರೆಯ ಪ್ರಾಂಶುಪಾಲೆ ಡಾ.ಮಮತಾ ಕೆ.ವಿ., ವೈದ್ಯಕೀಯ ಅಧೀಕ್ಷಕ ಡಾ.ಜಯಕೃಷ್ಣ ನಾಯಕ್, ವ್ಯವಸ್ಥಾಪಕ ರಮಾನಂದ ಕಾರಂತ್ ಕೆ., ಕರ್ಣಾಟಕ ಬ್ಯಾಂಕ್ ಮಂಗಳೂರು ಪ್ರಧಾನ ಕಚೇರಿಯ ಸಹಾಯಕ ಮಹಾಪ್ರಬಂಧಕ ರಮೇಶ್ ವೈದ್ಯ, ಉಡುಪಿ ಪ್ರಾದೇಶಿಕ ಕಚೇರಿಯ ಮುಖ್ಯ ಪಿಆರ್ಒ ಪಲ್ಲವಿ ಟಿ.ಎಸ್., ಉಡುಪಿ ರಥಬೀದಿ ಶಾಖೆಯ ಹಿರಿಯ ಶಾಖಾ ವ್ಯವಸ್ಥಾಪಕ ಪ್ರಶಾಂತ್ ಎಂ.ರಾವ್ ಮೊದಲಾದವರು ಉಪಸ್ಥಿತರಿದ್ದರು.