ಪಿಯುಸ್ ಸೋಜ 
ದಕ್ಷಿಣ ಕನ್ನಡ

ಮಾನಸಿಕ ಖಿನ್ನತೆಯಿಂದ ಆಟೋ ಚಾಲಕ ಆತ್ಮಹತ್ಯೆ

ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿ

ಮೂಲ್ಕಿ: ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ಐಕಳ ಗ್ರಾಮದ ನೆಲ್ಲಿಗುಡ್ಡೆ ಎಂಬಲ್ಲಿ ಆಟೋ ಚಾಲಕ ಪಿಯುಸ್ ಡಿಸೋಜಾ (61)ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಿಯುಸ್ ಡಿಸೋಜಾ 25 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಅನೇಕ ಬಾರಿ ಚಿಕಿತ್ಸೆ ಪಡೆದಿದ್ದರು. ಅವರು ಪ್ರತಿದಿನ ಬೆಳಗ್ಗೆ ಮನೆಯಿಂದ ವಾಕಿಂಗ್ ಹೋಗಿ ಬರುತ್ತಿದ್ದರು. ಅದರಂತೆ ಬುಧವಾರ ಬೆಳಗ್ಗೆ ಮನೆಯಿಂದ ವಾಕಿಂಗ್ ಹೋದವರು ವಾಪಸ್ ಬರದೇ ಇದ್ದುದರಿಂದ ಮನೆಯವರು ಹುಡುಕಾಡಿದಾಗ ರಮದೀಯ ಸಲ್ದಾನ್ ಎಂಬುವರ ಮನೆಯ ಹಿಂಬದಿಯ ಮರಕ್ಕೆ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೃತರ ಪತ್ನಿ ನೀಡಿದ ದೂರಿನಂತೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.