ಬಂಟ್ವಾಳ: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ ಮಾಡಲಾಯಿತು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಅವರಿಂದ ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ಪ್ರಶಸ್ತಿ ಸ್ವೀಕರಿಸಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಅಧ್ಯಕ್ಷ ಜಿ.ಟಿ.ದೇವೇಗೌಡ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ಐವನ್ ಡಿಸೋಜ, ಮಂಗಳೂರು ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ನಬಾರ್ಡ್ ಮುಖ್ಯ ಮಹಾ ಪ್ರಬಂಧಕ ಡಾ.ಸುರೇಂದ್ರ ಬಾಬು, ಸಹಕಾರ ಸಂಘಗಳ ನಿಬಂಧಕ ಟಿ.ಎಚ್.ಎಂ.ಕುಮಾರ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು, ರಾಜಾರಾಮ ಭಟ್ ಮೊದಲಾದವರಿದ್ದರು.