ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ, ಯುವತಿಯರಿಂದ ಹಣ ಪಡೆದು ವಂಚಿಸುತ್ತಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿ ಹಾಗೂ ಆತನಿಗೆ ಸಹಕಾರ ನೀಡುತ್ತಿದ್ದ ಇನ್ನೋರ್ವನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಸುಶಾಂತ್ ಅಂಕುಶ್ ಪೂಜಾರಿ ಯಾನೆ ಸುಶಾಂತ್ ಜಿ. ಕರ್ಕೇರಾ ಮತ್ತು ಆತನಿಗೆ ಸಹಕಾರ ನೀಡಿದ ಭಾಸ್ಕರ್ ಪ್ರಕರಣದ ಆರೋಪಿಗಳು.
ಪ್ರಕರಣದ ವಿವರ: ಮಹಿಳೆಯೊಬ್ಬರಿಗೆ ಸುಶಾಂತ್ ಪೂಜಾರಿ ಮ್ಯಾಟ್ರಮೋನಿ ಮೂಲಕ ಪರಿಚಯವಾಗಿದ್ದ. ಇದಾದ ಬಳಿಕ ೆ.2ರಂದು ಮಹಾರಾಷ್ಟ್ರದ ನವಮುಂಬಯಿಯಲ್ಲಿ ಮದುವೆ ನೆಪದಲ್ಲಿ ಹಂತಹಂತವಾಗಿ 6,60,000 ರೂ. ಹಣ ಪಡೆದುಕೊಂಡಿದ್ದ. ಇದಾದ ಬಳಿಕ ನ.15ರಂದು ನಾಪತ್ತೆಯಾಗಿದ್ದ. ನಂತರದ ದಿನಗಳಲ್ಲಿ ದೂರುದಾರರು ಅನುಮಾನಗೊಂಡು ಆತನ ಬಗ್ಗೆ ವಿಚಾರಿಸಿದಾಗ ಇದೇ ರೀತಿ ಸುಮಾರು ಕಡೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಮೋಸ ಮಾಡಿರುವ ಹಾಗೂ ಈ ಮೊದಲು ಒಂದು ಮದುವೆ ಆಗಿರುವ ವಿಚಾರ ತಿಳಿಯುತ್ತದೆ. ಈ ಹಿನ್ನಲೆಯಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಹಲವು ಯುವತಿಯರಿಗೆ ವಂಚನೆ: ಈ ಪ್ರಕರಣದಲ್ಲಿ ಸುಶಾಂತ್ ಪೂಜಾರಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆತ ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಾರಂ ಮೂಲಕ ಪರಿಚಯಮಾಡಿಕೊಂಡು 2021 ರಲ್ಲಿ ಉಡುಪಿಯ ಹುಡುಗಿಯೊಬ್ಬಳನ್ನು ಮದುವೆ ಆಗಿದ್ದ. ಇದಾದ ಬಳಿಕ ಉಡುಪಿ ಇಬ್ಬರು ಯುವತಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದುಕೊಂಡಿದ್ದ. ಇದಾದ ಬಳಿಕ ಮುಂಬಯಿಯ ಇಬ್ಬರು, ಬೆಂಗಳೂರಿನಲ್ಲಿ ಇಬ್ಬರು, ಕಾರ್ಕಳದ ಒಬ್ಬ ಯುವತಿಯನ್ನು ಮದುವೆ ಆಗುವುದಾಗಿ ನಂಬಿಸಿ ಮೊಸ ಮಾಡಿರುವ ಬಗ್ಗೆ ಒಪ್ಪಿಕೊಂಡಿರುತ್ತಾನೆ. ಆರೋಪಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿದೆ.
ನೆರವು ನೀಡಿದಾತನೂ ಸೆರೆ: ಈ ಪ್ರಕರಣದಲ್ಲಿ ಆರೋಪಿತ ಸುಶಾಂತ್ ಪೂಜಾರಿಯವನೊಂದಿಗೆ ಮುಲ್ಕಿ ನಿವಾಸಿ ಭಾಸ್ಕರ್ ಎಂಬಾತನು ದೂರುದಾರರಿಗೆ ಮತ್ತು ಕುಟುಂಬದವರಿಗೆ ನಂಬಿಸುವ ಉದ್ದೇಶದಿಂದ ಆರೋಪಿತ ಸುಶಾಂತ್ ನನ್ನ ಅಳಿಯ ಎಂದು ನಂಬಿಸಿದ್ದಾನೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಆರೋಪಿ ಸುಶಾಂತ್ ಪೂಜಾರಿ ವಿರುದ್ದ ಮಂಗಳೂರು ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.