ಶಾಸಕಿ ಭಾಗೀರಥಿ ಮುರುಳ್ಯ ರಕ್ತದಾನ ಶಿಬಿರ ಉದ್ಘಾಟಿಸಿದರು. ಪ್ರಮುಖರಾದ ವೆಂಕಟ್ ವಳಲಂಬೆ, ರಾಕೇಶ್ ರೈ ಕೆಡೆಂಜಿ, ಪ್ರದೀಪ್ ರೈ ಮನವಳಿಕೆ ಮತ್ತಿತರರಿದ್ದರು.  
ದಕ್ಷಿಣ ಕನ್ನಡ

ರಕ್ತದಾನ ಸಮಾಜಮುಖಿ ಸೇವೆ

ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಶಿಬಿರ

ನೆಲ್ಯಾಡಿ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಹಾಗೂ 25 ವರ್ಷಗಳ ಸಾಧನೆಯ ಸವಿನೆನಪಿಗಾಗಿ ಬಿಜೆಪಿ ಸಂಕಲ್ಪ ಅಭಿಯಾನ ಹಮ್ಮಿಕೊಂಡಿದೆ. ಇದರ ಅಂಗವಾಗಿ ಕೊಯಿಲ ಮಹಾಶಕ್ತಿ ಕೇಂದ್ರ ರಕ್ತದಾನ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ಬಿಜೆಪಿ ಕೊಯಿಲ ಮಹಾಶಕ್ತಿ ಕೇಂದ್ರದ ವತಿಯಿಂದ ಸಂಕಲ್ಪ ಅಭಿಯಾನದ ಅಂಗವಾಗಿ ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಹಾಗೂ ಜಿಲ್ಲಾ ಬ್ಲಡ್ ಬ್ಯಾಂಕ್ ಮಂಗಳೂರು ಸಹಕಾರದಲ್ಲಿ ಭಾನುವಾರ ರಕ್ತದಾನ ಶಿಬಿರ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು.

ಸುಳ್ಯ ಮಹಾಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಜಿಲ್ಲಾ ಕಾರ್ಯದರ್ಶಿ ಪುಷ್ಪಾ ಮೇದಪ್ಪ, ಸುಳ್ಯ ಯುವಮೋರ್ಚಾ ಅಧ್ಯಕ್ಷ ಶ್ರೀಕಾಂತ್, ವಿನಯ್ ಕಂದಡ್ಕ, ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್‌ನ ದತ್ತಾತ್ರೇಯ ರಾವ್, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ್ ಗೌಡ ಎಸ್., ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಬಾಲಕೃಷ್ಣ ಬಾಣಜಾಲ್ ಉಪಸ್ಥಿತರಿದ್ದರು.

ಕೊಯಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಾಮಚಂದ್ರ ವಂದಿಸಿದರು. ರವಿಚಂದ್ರ ಹೊಸವಕ್ಲು ನಿರೂಪಿಸಿದರು.