dead body 
ದಕ್ಷಿಣ ಕನ್ನಡ

ಯುವಕನ ಶವ ಪತ್ತೆ, ಕೊಲೆ ಶಂಕೆ

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿ

ಗುರುಪುರ: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳಂಬೆ ಗ್ರಾಮದ ಪಾರ್ದನೆ ಎಂಬಲ್ಲಿ ಮೂರು ದಿನಗಳ ಹಿಂದೆ ಯುವಕನ ಶವ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿ ಉತ್ತರ ಪ್ರದೇಶ ಮೂಲದವನಾಗಿದ್ದು, ಬೇರೆಡೆ ಕೊಲೆಗೈದು ಇಲ್ಲಿನ ನಿರ್ಜನ ಪ್ರದೇಶದಲ್ಲಿ ಶವ ಎಸೆದಿರುವ ಸಾಧ್ಯತೆ ಕಂಡುಬಂದಿದೆ.

ಬಜ್ಪೆ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಈತ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಎನ್ನಲಾಗಿದ್ದು, ಸಹವರ್ತಿಗಳ ಮಧ್ಯೆ ಹಣದ ವಿಷಯದಲ್ಲಿ ನಡೆದ ತಕರಾರು ಕೊಲೆಗೆ ಕಾರಣವಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಶವ ಪತ್ತೆಯಾದ ಸ್ಥಳದಲ್ಲಿ ಶುಕ್ರವಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.