’ಕಾರಂತರ ಸುಳಿಯಲ್ಲಿ’ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವು ಎ.18 ರಂದು ಶನಿವಾರ ಸಂಜೆ 5 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಶಿವರಾಮ ಕಾರಂತ ಪೀಠ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಹಾಗೂ ಡಾ.ಉಲ್ಲಾಸ ಕಾರಂತ ಬೆಂಗಳೂರು ಇವರ ಸಹಯೋಗದಲ್ಲಿ ಡಾ.ವಿಶ್ವೇಶ್ವರ ಭಟ್ ಬೆಂಗಳೂರು ಇವರ ಕನ್ನಡ ಅನುವಾದಿತ ಕೃತಿ ’ಕಾರಂತರ ಸುಳಿಯಲ್ಲಿ’ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವು ಎ.18 ರಂದು ಶನಿವಾರ ಸಂಜೆ 5 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.
ವಿಶ್ರಾಂತ ಕುಲಪತಿ ಹಾಗೂ ವಿಮರ್ಶಕರಾದ ಪ್ರೊ.ವಿವೇಕ್ ರೈ ಅವರು ಕೃತಿಯನ್ನು ಅನಾವರಣಗೊಳಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು ವಹಿಸಲಿದ್ದಾರೆ. ಲೇಖಕರು ಹಾಗೂ ವನ್ಯಜೀವಿ ತಜ್ಞರಾದ ಡಾ.ಉಲ್ಲಾಸ ಕಾರಂತ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಮಹಾತ್ಮ ಗಾಂಧಿ ಪ್ರತಿಷ್ಠಾನ ಎನ್ ಜಿ ಮೋಹನ್, ವಿಶ್ವವಿದ್ಯಾಲಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಗಣಪತಿ ಗೌಡ ಮೊದಲಾದವರು ಉಪಸ್ಥಿತರಿರಲಿದ್ದಾರೆ ಎಂದು ಶಿವರಾಮ ಕಾರಂತ ಪೀಠದ ನಿರ್ದೇಶಕರಾದ ಪ್ರೊ.ನಾಗಪ್ಪ ಗೌಡ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.