Accident 
ದಕ್ಷಿಣ ಕನ್ನಡ

ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ, ಬಾಲಕ ಗಂಭೀರ

ಶಾಂತಿಗೋಡು ಗ್ರಾಮದ ವೀರಮಂಗಲ ಶಾಲೆಯ ಎದುರು ಘಟನೆ

ಪುತ್ತೂರು ಗ್ರಾಮಾಂತರ: ಬೈಕ್ ಡಿಕ್ಕಿ ಹೊಡೆದು ನಾಲ್ಕು ವರ್ಷದ ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಶಾಂತಿಗೋಡು ಗ್ರಾಮದ ವೀರಮಂಗಲ ಶಾಲೆಯ ಎದುರು ಗಡಿಪಿಲ-ವೀರಮಂಗಲ ಗ್ರಾಮೀಣ ಸಂಪರ್ಕ ರಸ್ತೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಶಾಂತಿಗೋಡು ಗ್ರಾಮದ ವೀರಮಂಗಲ ಸಮೀಪದ ಹೊರಲಡಿ ನಿವಾಸಿ ವೆಂಕಪ್ಪ ಗೌಡ ಅವರ ಮೊಮ್ಮಗ ಅಥರ್ವ ಬಿ. ಗೌಡ (4) ಗಾಯಳು. ವೀರಮಂಗಲ ಶಾಲೆಯ ಎದುರು ರಸ್ತೆ ದಾಟುತ್ತಿದ್ದ ಬಾಲಕನಿಗೆ ಜೀಯಾದ್ ಎಂಬುವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿ ಹೊಡೆದಿದೆ.

ರಸ್ತೆಗೆ ಬಿದ್ದು ತಲೆಯ ಹಿಂಭಾಗಕ್ಕೆ ಗಂಭೀರ ಗಾಯಗೊಂಡ ಅಥರ್ವನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಸವಾರನ ಅಜಾಗರೂಕತೆ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿ ಬಾಲಕನ ಅಜ್ಜ ವೆಂಕಪ್ಪ ಗೌಡ ಪೊಲೀಸರಿಗೆ ದೂರು ನೀಡಿದ್ದಾರೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.