ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಭಾನುವಾರ ನಡೆದ ಮುಷ್ಟಿ ಕಾಣಿಕೆ ಸಮರ್ಪಣೆ ಕಾರ್ಯಕ್ರಮದಲ್ಲಿ ಸಂಸದ ಬ್ರಿಜೇಶ್ ಚೌಟ ಭಾಗವಹಿಸಿದರು.  
ದಕ್ಷಿಣ ಕನ್ನಡ

ಸಸಿಹಿತ್ಲು ಭಗವತೀ ದೇವಳದಲ್ಲಿ ಮುಷ್ಟಿ ಕಾಣಿಕೆ ಸಮರ್ಪಣೆ : ಮಾರ್ಚ್ 4ರಿಂದ 8ರವರೆಗೆ ಬ್ರಹ್ಮಕಲಶೋತ್ಸವ

ಮೂಲ್ಕಿ: ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಮಾರ್ಚ್ 4ರಿಂದ 8ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಭಾನುವಾರ ನಡೆದ ಮುಷ್ಟಿ ಕಾಣಿಕೆ ಸಮರ್ಪಣೆ ಕಾರ್ಯಕ್ರಮದಲ್ಲಿ ಸಂಸದ ಬ್ರಿಜೇಶ್ ಚೌಟ ಭಾಗವಹಿಸಿ ಶುಭ ಕೋರಿದರು.

ದೇವಸ್ಥಾನದ ಅನುವಂಶಿಕ ಮೊಕ್ತೇಸರ ಅಪ್ಪು ಯಾನೆ ಶ್ರೀನಿವಾಸ ಪೂಜಾರಿ, ಕ್ಷೇತ್ರದ ಆಡಳಿತ ಮೊಕ್ತೇಸರ ಚಂದ್ರಶೇಖರ ಬೆಳ್ಚಡ, ಆಡಳಿತ ಸಮಿತಿ ಅಧ್ಯಕ್ಷ ವಾಮನ್ ಇಡ್ಯಾ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಬಂಗೇರ, ಕೋಶಾಧಿಕಾರಿ ಸುರೇಶ್ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.
ಮುಷ್ಟಿ ಕಾಣಿಕೆ ಸಮರ್ಪಣೆ ಮುಂದುವರಿಕೆ
ಸಸಿಹಿತ್ಲು ಶ್ರೀ ಭಗವತಿ ದೇವಿಯ ಪ್ರೇರಣೆಯಿಂದ ಹಾಗೂ ಭಕ್ತರ ವಿನಂತಿ ಮೇರೆಗೆ, ಬ್ರಹ್ಮಕಲಶೋತ್ಸವದವರೆಗೂ ಮುಷ್ಟಿ ಕಾಣಿಕೆ ಸಮರ್ಪಣೆ ಅವಕಾಶ ಮುಂದುವರಿಸಲಾಗುವುದು. ಭಕ್ತರು ಭಕ್ತಿ-ಸಾಮರ್ಥ್ಯಕ್ಕೆ ತಕ್ಕಂತೆ ಮುಷ್ಟಿ ಕಾಣಿಕೆಯಲ್ಲಿ ಭಾಗವಹಿಸುವಂತೆ ಸಮಿತಿ ಪ್ರಕಟಣೆ ತಿಳಿಸಿದೆ.