ಗುರುವಾಯನಕೆರೆ ವಿದ್ವತ್ ಕಾಲೇಜಿನಲ್ಲಿ ಹರೆಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಯಿತು. ಪ್ರಮುಖರಾದ ಪಿ.ಬಿ.ಹರೀಶ್ ರೈ, ಶುಭಾಶ್ಚಂದ್ರ ಶೆಟ್ಟಿ, ಫಾ.ಜೋಸೆಫ್ ವಲಿಯಪರಂಬಿಲ್ ಮತ್ತಿತರರು ಉಪಸ್ಥಿತರಿದ್ದರು. 
ದಕ್ಷಿಣ ಕನ್ನಡ

ಸಮಾಜಮುಖಿ ಚಿಂತನೆಯ ಶಿಕ್ಷಣ ಸಂಸ್ಥೆ ವಿದ್ವತ್ : ಪಿ.ಬಿ.ಹರೀಶ್ ರೈ

ಸೌಮ್ಯ ಆರ್
ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವತಿಯಿಂದ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ‘ವಾಕ್-ಇನ್ ಟು ವಿದ್ವತ್, ಎ ಸ್ಟೆಪ್ ಇನ್‌ಟು ಸಕ್ಸಸ್’ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪದ್ಮಶ್ರೀ ಹರೇಕಳ ಹಾಜಬ್ಬ ವಾಕ್ ಇನ್ ಟು ವಿದ್ವತ್, ಎ ಸ್ಟೆಪ್ ಇನ್ ಟು ಸಕ್ಸಸ್ ನಾಮಫಲಕ ಅನಾವರಣಗೊಳಿಸಿದರು. ವಿದ್ವತ್ ಕಾಲೇಜಿನ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಸಿರೋ ಮಲಬಾರ್ ಕೆಥೊಲಿಕ್ ಧರ್ಮಪ್ರಾಂತ್ಯದ ಪ್ರಧಾನ ಗುರುಗಳಾದ ಫಾ.ಜೋಸೆಫ್ ವಲಿಯಪರಂಬಿಲ್ ಕಾಲೇಜಿನ ಭೌತಶಾಸ್ತ್ರ ಪ್ರಯೋಗಾಲಯ ಉದ್ಘಾಟಿಸಿದರು. ತಹಸೀಲ್ದಾರ್ ಪೃಥ್ವಿ ಸಾನಿಕಮ್ ರಸಾಯನಶಾಸ್ತ್ರ ಪ್ರಯೋಗಾಲಯ ಉದ್ಘಾಟಿಸಿದರು. ಕುವೆಟ್ಟು ಗ್ರಾಪಂ ಅಧ್ಯಕ್ಷೆ ಭಾರತಿ ಶೆಟ್ಟಿ ಜೀವಶಾಸ್ತ್ರ ಪ್ರಯೋಗಾಲಯ ಉದ್ಘಾಟಿಸಿದರು.
ಶಿಕ್ಷಣ ಸಂತ ಹರೇಕಳ ಹಾಜಬ್ಬ ಹಾಗೂ ಪಿ.ಬಿ.ಹರೀಶ್ ರೈ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ಸಂಸ್ಥೆ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅವರು ಉಚಿತ ಶೈಕ್ಷಣಿಕ ಸಮಾಲೋಚನೆಯಲ್ಲಿ ನೋಂದಾಯಿಸಿದ ವಿದ್ಯಾರ್ಥಿಗಳಿಗೆ ಬಹುಮಾನವಾಗಿ ನೀಡುವ ಟಿ ಶರ್ಟ್ ಅನಾವರಣಗೊಳಿಸಿದರು.

ಬಡತನವಾದ್ದರಿಂದ ನಾನು ಶಿಕ್ಷಣದಿಂದ ವಂಚಿತನಾದೆ. ಅದರಿಂದ ನಾನು ಪಟ್ಟ ಕಷ್ಟ ಬೇರೊಬ್ಬರು ಪಡಬಾರದು ಎಂಬ ನೆಲೆಯಲ್ಲಿ ನನ್ನೂರಲ್ಲಿ ಸರ್ಕಾರಿ ಶಾಲೆ ತೆರೆಯುವ ಕನಸು ಕಂಡೆ. ಈ ಅಭಿಲಾಷೆ ಹೆಮ್ಮರವಾಗಿ ಬೆಳೆಯಿತು. ಅದನ್ನು ಮಾಧ್ಯಮಗಳು ಗುರುತಿಸಿದ್ದರಿಂದ ಈ ಬಡವನಿಗೆ ಇಂದು ಪದ್ಮಶ್ರೀ ಪ್ರಶಸ್ತಿ ಬಂದಿದೆ. ವಿದ್ಯಾರ್ಥಿಗಳು ಕಲಿತ ಶಿಕ್ಷಣ ಸಂಸ್ಥೆಗೆ ಕೀರ್ತಿ ತರಬೇಕು.

ವಿದ್ವತ್ ಪ್ರತಿಭಾನ್ವೇಷಣೆ ಕಾರ್ಯಕ್ರಮದಡಿ ಕರ್ನಾಟಕ ರಾಜ್ಯದ ಎಲ್ಲೆಡೆಯಿಂದ ಆಗಮಿಸುವ 10ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪರೀಕ್ಷೆ ಬರೆಯುವ ಅವಕಾಶವನ್ನು ವಿದ್ವತ್ ಎಜುಕೇಶನ್ ಫೌಂಡೇಶನ್ ನೀಡಲಿದೆ. ಈ ಪರೀಕ್ಷೆಯಲ್ಲಿ ಅಗ್ರ ಕ್ರಮಾಂಕದಲ್ಲಿ ಗುರುತಿಸಿರುವ ವಿದ್ಯಾರ್ಥಿಗೆ ಲ್ಯಾಪ್‌ಟಾಪ್ ಮತ್ತು ಇತರ ಪ್ರತಿಭಾನ್ವಿತ 10 ವಿದ್ಯಾರ್ಥಿಗಳಿಗೆ ಟ್ಯಾಬ್ ವಿಶೇಷ ಬಹುಮಾನವಾಗಿ ನೀಡಲಾಗುವುದು. ಪ್ರತಿಭಾ ಪರೀಕ್ಷೆಯಲ್ಲಿ ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳಿಗೂ ಅವರ ಅಂಕ ಗಳಿಕೆಗನುಗುಣವಾಗಿ ಕಾಲೇಜು ಶುಲ್ಕದಲ್ಲಿ ವಿಶೇಷ ರಿಯಾಯಿತಿ ಒದಗಿಸಲಾಗುತ್ತದೆ.

- ಸುಭಾಶ್ಚಂದ್ರ ಶೆಟ್ಟಿ ವಿದ್ವತ್ ಪಿಯು ಕಾಲೇಜು ಅಧ್ಯಕ್ಷ