ಕುಂದಾಪುರ: ಆರಾಟೆ ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಮಧ್ಯಾಹ್ನ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಕುಂದಾಪುರದ ಅಜಿತ್ ಪೌಲ್ ಲೂಯಿಸ್ ಮೃತಪಟ್ಟಿದ್ದಾರೆ.
ಅಜಿತ್ ಪಾವ್ಲ್ ಕುಂದಾಪುರದಿಂದ ತ್ರಾಸಿ ಕಡೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಆರಾಟೆ ಸೇತುವೆ ಸಮೀಪ ತ್ರಾಸಿ ಕಡೆಯಿಂದ ಕುಂದಾಪುರದತ್ತ ಬರುತ್ತಿದ್ದ ಕಾರು ನೇರ ಡಿಕ್ಕಿ ಹೊಡೆದಿದೆ. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.