ಬಂಟ್ವಾಳ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ನರೇಗಾ ಬಚಾವೋ ಸಂಗ್ರಾಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿದರು. ಉಭಯ ಬ್ಲಾಕ್ ಅಧ್ಯಕ್ಷರಾದ ಚಂದ್ರಶೇಖರ ಭಂಡಾರಿ, ಬಾಲಕೃಷ್ಣ ಅಂಚನ್, ಪಕ್ಷ ಪ್ರಮುಖರಾದ ಪದ್ಮಶೇಖರ ಜೈನ್, ಪಿಯೂಸ್ ಎಲ್.ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ಇತರರಿದ್ದರು.
ಮಹಾತ್ಮಗಾಂಧಿ ಹೆಸರಲ್ಲಿರುವ ನರೇಗಾವನ್ನು ಬದಲಾಯಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹೊರಟಿದೆ. ಯುಪಿಎ ಸರ್ಕಾರ ಜಾರಿಗೆ ತಂದ ನರೇಗಾ ಯೋಜನೆಯಿಂದ ಗ್ರಾಮಾಭಿವೃದ್ಧಿಯಾಗಿದ್ದರೆ, ಇದರ ಹೆಸರು ಬದಲಾಯಿಸಿ ಮಾರ್ಪಾಡು ಮಾಡುವುದರಿಂದ ಬಡವರಿಗೆ ಅನ್ಯಾಯವಾಗುವುದಲ್ಲದೆ, ಅಭಿವೃದ್ಧಿ ಸ್ಥಗಿತಗೊಳ್ಳುತ್ತದೆ ಮಾಜಿ ಸಚಿವ ಬಿ.ರಮಾನಾಥ ರೈ ಆತಂಕ ವ್ಯಕ್ತಪಡಿಸಿದರು.
ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನಕ್ಕೆ ಬಂದಾಗ ಜಗತ್ತಿನಲ್ಲೇ ಉತ್ತಮ ಯೋಜನೆ ಎಂದು ಪ್ರಶಂಸೆ ದೊರಕಿತು. ಅದಕ್ಕೆ ಗ್ರಾಮ ಸ್ವರಾಜ್ಯ ಬಯಸಿದ ಮಹಾನ್ ವ್ಯಕ್ತಿ ಮಹಾತ್ಮಗಾಂಧಿಯವರ ಹೆಸರು ಇಡಲಾಗಿತ್ತು. ಈಗ ಗಾಂಧಿ ಅವರ ಹೆಸರು ಅಳಿಸುವ ಕೆಲಸ ನಡೆಯುತ್ತಿದೆ. ಇದರ ಮಾರ್ಪಾಡುಗಳಿಂದ ಬಡವರಿಗೆ ಸಾಕಷ್ಟು ಅನ್ಯಾಯ ಆಗುತ್ತಿದೆ ಎಂದರು.
ಉಭಯ ಬ್ಲಾಕ್ ಅಧ್ಯಕ್ಷರಾದ ಚಂದ್ರಶೇಖರ ಭಂಡಾರಿ, ಬಾಲಕೃಷ್ಣ ಅಂಚನ್, ಪಕ್ಷ ಪ್ರಮುಖರಾದ ಪದ್ಮಶೇಖರ ಜೈನ್, ಪಿಯೂಸ್ ಎಲ್.ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮಹಮ್ಮದ್, ಬೇಬಿ ಕುಂದರ್, ಕೆ.ಸಂಜೀವ ಪೂಜಾರಿ, ಅಶ್ವನಿ ಕುಮಾರ್ ರೈ, ಪದ್ಮನಾಭ ರೈ, ಶಬೀರ್ ಸಿದ್ದಕಟ್ಟೆ, ಬಿ.ಎಂ.ಅಬ್ಬಾಸ್ ಆಲಿ, ಇಬ್ರಾಹಿಂ ನವಾಝ್ ಬಡಕಬೈಲ್, ಸುದರ್ಶನ ಜೈನ್, ಲವೀನಾ ಮೊರಾಸ್, ಮಮತಾ ಗಟ್ಟಿ, ಜಯಂತಿ ಪೂಜಾರಿ, ಜೋಸ್ಪಿನ್ ಡಿಸೋಜ, ಸುದೀಪ್ ಕುಮಾರ್ ಶೆಟ್ಟಿ, ಮಹಮ್ಮದ್ ನಂದಾವರ, ವೆಂಕಪ್ಪ ಪೂಜಾರಿ, ಮಲ್ಲಿಕಾ ಶೆಟ್ಟಿ, ಸದಾಶಿವ ಬಂಗೇರ, ಸಿದ್ದೀಕ್ ಗುಡ್ಡೆಯಂಗಡಿ, ಲೋಲಾಕ್ಷ ಶೆಟ್ಟಿ, ವೆಂಕಪ್ಪ ಪೂಜಾರಿ, ಮಹಿಳಾ, ಯುವ ಕಾಂಗ್ರೆಸ್ ಪದಾಧಿಕಾರಿಗಳು, ಪಕ್ಷದ ಹಲವು ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಂಗ್ರೆಸ್ ತಂದ ಕಾಯ್ದೆಗಳು ಜನರಿಗೆ ಉಪಯೋಗವಾಗಿದೆ. ಪ್ರತಿಯೊಂದು ಕಾರ್ಯಕ್ರಮ ಬಡವರಿಗೆ ಅನ್ನ ಕೊಡುವ ಕಾರ್ಯಕ್ರಮಗಳಾಗಿದ್ದವು. ಆದರೆ, ಬಿಜೆಪಿ ಸರ್ಕಾರ ತಂದ ಕಾಯ್ದೆಗಳು ಜನರಿಗೆ ತೊಂದರೆಯಾಗಿದೆ. ಹೀಗಾಗಿ ಪಾದಯಾತ್ರೆ ಆಯೋಜಿಸಿದ್ದೇವೆ. ನೈಜ ಕಾಂಗ್ರೆಸಿಗರೆಲ್ಲರೂ ಇದರಲ್ಲಿ ಭಾಗವಹಿಸಿದ್ದಾರೆ, ಮಹಿಳಾ, ಯುವ ಕಾಂಗ್ರೆಸ್, ಕಾಂಗ್ರೆಸ್ ಪಕ್ಷದ ಎಲ್ಲರೂ ಭಾಗವಹಿಸಿದ್ದಾರೆ.