ಕುಂದಾಪುರ: ಕೋಟೇಶ್ವರದ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಟ್‌ಬೇಲ್ತೂರು ಗ್ರಾಮದ ರಾಘವೇಂದ್ರ ಜೋಗಿ(48) ಎಂಬುವರು ತನ್ನ ಮನೆ ಸಮೀಪ ರವಿ ಬಳೆಗಾರ ಎಂಬುವರ ಜಾಗದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತ್ನಿ ಹಾಗೂ ಪುತ್ರಿಯೊಂದಿಗೆ ಕಟ್‌ಬೆಲ್ತೂರಿನಲ್ಲಿ ವಾಸ ಮಾಡಿಕೊಂಡಿದ್ದ ಅವರು 18 ವರ್ಷಗಳಿಂದ ಜೋಗಿ ವಿವಿಧೋದ್ದೇಶ ಸಹಕಾರಿ ಸಂದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮನೆಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ತನ್ನ ಸಾವಿಗೆ ತಾನೇ ಕಾರಣ ಎಂಬುದಾಗಿ ಬರೆದಿದ್ದಾರೆ. ಕುಂದಾಪುರ ಗ್ರಾವಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ನಾಡ ಗ್ರಾಮದ ನಾಡಬಡಾಕೆರೆ ರಸ್ತೆಯ ಉಪ್ಕಲ್ ಮಠದ ಬಳಿ ರಸ್ತೆ ಗುಂಡಿ ತಪ್ಪಿಸಲು ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಬೈಕ್ ಸವಾರರಾದ ಆಲೂರು ಗ್ರಾಮದ ತಾರಿಬೇರು ನಿವಾಸಿ ಸುಧೀರ್ ಹಾಗೂ ಜನಾರ್ದನ ಎಂಬುವರು ಬಿದ್ದು ಗಾಯಗೊಂಡಿದ್ದಾರೆ. ಜನಾರ್ದನ ಪೂಜಾರಿ ಅವರು ಸುಧೀರ್ ಅವರನ್ನು ಕುಳ್ಳಿರಿಸಿಕೊಂಡು ವಂಡ್ಸೆಯಿಂದ ಬಡಾಕೆರೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.