ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ದ.ಕ. ಜಾನಪದ ಜಾತ್ರೆಗೆ ಅಳದಂಗಡಿ ಅರಮನೆ ನಗರಿಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಚಾಲನೆ ನೀಡಿದರು.
ರಾಜ್ಯಮಟ್ಟದ ಫೋಟೋ ಸ್ಪರ್ಧೆಯ ವಿಜೇತರಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಅರುವ ಶ್ರೀ ಮತ್ತು ಸತ್ಯಶ್ರೀ ಪ್ರಶಸ್ತಿ ವಿತರಿಸಲಾಯಿತು. ಮಕ್ಕಳ ಸಾಹಿತಿ ಪ.ರಾ.ಶಾಸ್ತ್ರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಗ್ರಾಪಂ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಹಿರಿಯರಾದ ಭುಜಬಲಿ, ನಿತ್ಯಾನಂದ ನಾವರ, ಸುಲ್ಕೇರಿಮೊಗ್ರ ಸಿ.ಎ. ಬ್ಯಾಂಕ್ ಅಧ್ಯಕ್ಷ ಸುಧೀರ್ ಆರ್.ಸುವರ್ಣ, ದ.ಕ. ಜಿಲ್ಲಾ ಜಾನಪದ ಸಾಹಿತ್ಯ ಸಂಸ್ಥೆ ಅಧ್ಯಕ್ಷ ಪ್ರವೀಣ್ ಕೊಡಿಯಾಲ್‌ಬೈಲ್, ಅಳದಂಗಡಿ ಗ್ರಾಪಂ ಅಧ್ಯಕ್ಷ ಸರಸ್ವತಿ, ಯೋಜನೆ ಮೇಲ್ವಿಚಾರಕಿ ಯಶೋದಾ, ಎಕ್ಸಲೆಂಟ್ ಕಾಲೇಜಿನ ಉಪನ್ಯಾಸಕ ವಾದಿರಾಜ ಕಲ್ಲೂರಾಯ ಉಪಸ್ಥಿತರಿದ್ದರು.
ಆಮಂತ್ರಣ ಸೇವಾ ಪ್ರತಿಷ್ಠಾನ ಅಧ್ಯಕ್ಷ ವಿಜಯ ಕುಮಾರ್ ಜೈನ್ ಸ್ವಾಗತಿಸಿದರು. ಎಚ್.ಕೆ.ನಯನಾಡು ಸನ್ಮಾನಿತರನ್ನು ಪರಿಚಯಿಸಿದರು.
ನಮ್ಮದು ಸಾಂಸ್ಕೃತಿಕವಾಗಿ ಶ್ರೀಮಂತ ಜಿಲ್ಲೆ. ಅದಕ್ಕೆ ಕಾರಣ ನಮ್ಮ ಹೆತ್ತವರು ನೀಡುತ್ತಿರುವ ಸಂಸ್ಕಾರ. ಹಿಂದೆ ಕೂಡು ಕುಟುಂಬ ಪದ್ಧತಿ ಇರುವಾಗ ಕಲೆ, ಸಂಸ್ಕೃತಿ ಉಳಿಸುವ ಕಾರ್ಯವಾಗುತ್ತಿತ್ತು. ಇಂದು ಇಂತಹ ಸಂಘ-ಸಂಸ್ಥೆಗಳು ಈ ಕಾರ್ಯವನ್ನು ಮಾಡುತ್ತಿವೆ. ಇಂತಹ ಕಾರ್ಯಕ್ರಮಗಳಿಗೆ ಜನರ ಪ್ರೋತ್ಸಾಹವೂ ಇದೆ. ಮಕ್ಕಳಲ್ಲಿ ಅನೇಕ ಕನಸುಗಳು, ಭಾವನೆಗಳು ಇರುತ್ತವೆ. ಪಾಲಕರು ಅದನ್ನು ಗುರುತಿಸಿ ಬೆಳೆಸುವ ಕಾರ್ಯ ಮಾಡಬೇಕು.