ತುಂಬೆ ವಲಯದ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾವೇಶದಲ್ಲಿ ಸಚಿವ ಯು.ಟಿ.ಖಾದರ್ ಅವರನ್ನು ಅಭಿನಂದಿಸಲಾಯಿತು. ಪ್ರಮುಖರಾದ ವಜ್ರನಾಭ ಶೆಟ್ಟಿ, ದಿನೇಶ್, ಕೃಷ್ಣ ಕುಮಾರ್ ಪೂಂಜ ಮತ್ತಿತರರಿದ್ದರು.
ವಿಜಯವಾಣಿ ಸುದ್ದಿಜಾಲ ಬಂಟ್ವಾಳ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ದೂರದೃಷ್ಟಿ ಯೋಜನೆಗಳಿಂದ ಕರಾವಳಿ ಭಾಗದ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವಂತಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು.
ಫರಂಗಿಪೇಟೆ ಸೇವಾಂಜಲಿ ಸಭಾಭವನದಲ್ಲಿ ಭಾನುವಾರ ಆಯೋಜಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಬಂಟ್ವಾಳ ಘಟಕದ ತುಂಬೆ ವಲಯದ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಾಧನಾ ಸಮಾವೇಶವನ್ನು ಉದ್ಘಾಟಿಸಿ, ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ಮಾತನಾಡಿದರು.
ಅರ್ಕುಳ ಬೀಡು ಉಳ್ಳಾಕ್ಲು ಮಗೃಂತಾಯಿ ಕ್ಷೇತ್ರದ ಧರ್ಮದರ್ಶಿ ವಜ್ರನಾಭ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಡಿ., ಸೇವಾಂಜಲಿ ಪ್ರತಿಷ್ಠಾನ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ, ವಕೀಲೆ ಸಹನಾ ಕುಂದರ್ ಸೂಡ, ಉದ್ಯಮಿ ಐತಪ್ಪ ಆಳ್ವ ಸುಜೀರುಗುತ್ತು, ಜೋತಿಷಿ ಅನಿಲ್ ಪಂಡಿತ್ ಬ್ರಹ್ಮರಕೂಟ್ಲು, ತಾ.ಪಂ. ಮಾಜಿ ಸದಸ್ಯ ಗಣೇಶ್ ಸುವರ್ಣ, ಶಿಕ್ಷಕ ದೇವದಾಸ್, ಜನಜಾಗೃತಿ ವೇದಿಕೆ ಸದಸ್ಯ ಸದಾನಂದ ಆಳ್ವ ಕಂಪ, ಸದಸ್ಯರಾದ ಭಾಸ್ಕರ ಚೌಟ, ತಾರಾನಾಥ ಕೊಟ್ಟಾರಿ, ಪುದು ಗ್ರಾ.ಪಂ. ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಸಮೀರಾ, ಒಕ್ಕೂಟ ಸೇವಾ ಪ್ರತಿನಿಧಿಗಳಾದ ಅಮಿತಾ, ಮಲ್ಲಿಕಾ, ಅನಿತಾ, ತುಳಸಿ, ಕುಸುಮಾವತಿ, ಪ್ರತಿಭಾ, ವನಿತಾ ಮೊದಲಾದವರಿದ್ದರು.
ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ. ಸ್ವಾಗತಿಸಿದರು. ಫರಂಗಿಪೇಟೆ ಒಕ್ಕೂಟ ಸೇವಾ ಪ್ರತಿನಿಧಿ ಅಮಿತಾ ವರದಿ ವಾಚಿಸಿದರು. ತುಂಬೆ ವಲಯ ಮೇಲ್ವಿಚಾರಕಿ ಮಮತಾ ಗೋಪಾಲಕೃಷ್ಣ ವಂದಿಸಿದರು.