ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗೆ ಡಾ.ಪ್ರಶಾಂತ್ ಶೆಟ್ಟಿ ಅವರಿಗೆ ಆಯುಷ್ಭೂಷಣ ಪುರಸ್ಕಾರ ಪ್ರದಾನಿಸಲಾಯಿತು.
ಯೋಗ ಪ್ರಕೃತಿ ಚಿಕಿತ್ಸೆ ಕ್ಷೇತ್ರದ ಅಭಿವೃದ್ಧಿಗೆ ನೀಡಿದ ಅನನ್ಯ ಕೊಡುಗೆ, ಸಮಾಜಮುಖಿ ಸೇವೆ ಪರಿಗಣಿಸಿ ಮಂಗಳೂರಿನಲ್ಲಿ ನಡೆದ ಆಯುಷ್ ಹಬ್ಬದ ಸಂಭ್ರಮದ ಅಂಗವಾಗಿ ಡಾ.ಪ್ರಶಾಂತ್ ಶೆಟ್ಟಿ ಅವರಿಗೆ ಆಯುಷ್ ಭೂಷಣ ಪುರಸ್ಕಾರ ನೀಡಿ ಗೌರವಿಸಲಾಯಿತು.
ಮೂಲತಃ ಹೆಬ್ರಿ ತಾಲೂಕಿನವರಾದ ಡಾ.ಪ್ರಶಾಂತ್ ಶೆಟ್ಟಿ ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲ, ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿಯಾಗಿ, ಇದುವರೆಗಿನ ತಮ್ಮ 32 ವಷರ್ಗಳ ಸೇವಾ ಅವಧಿಯಲ್ಲಿ 4 ಲಕ್ಷಕ್ಕೂ ಅಧಿಕ ರೋಗಿಗಳಿಗೆ ಪ್ರಕೃತಿ ಚಿಕಿತ್ಸೆ ಮತ್ತು ಯೋಗದ ಮೂಲಕ ಆರೋಗ್ಯ ಸೇವೆ ಒದಗಿಸಿ ರೋಗಮುಕ್ತ ಜೀವನದತ್ತ ಮುನ್ನಡೆಸಿದ್ದಾರೆ.