ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ
- ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿಕೆ
ಮಂಗಳೂರು: ಸಚಿವ ಸ್ಥಾನ ಹಾಗೂ ಸಂಪುಟ ದರ್ಜೆಯ ಸೌಲಭ್ಯಗಳನ್ನು ಅನುಭವಿಸಲು ಸದಾ ಮುಂಚೂಣಿಯಲ್ಲಿರುತ್ತಿದ್ದ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಅವರು ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರ ಧ್ವಜಾರೋಹಣ ಮಾಡಲು ನಿರಾಕರಿಸಿರುವುದು ಸ್ವಾತಂತ್ರ್ಯ ಹೋರಾಟಗಾರರಿಗೆ, ದೇಶಕ್ಕೆ ಹಾಗೂ ರಾಷ್ಟ್ರ ಧ್ವಜಕ್ಕೆ ಮಾಡಿರುವ ಬಹುದೊಡ್ಡ ಅಪಮಾನ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಖೇದ ವ್ಯಕ್ತಪಡಿಸಿದ್ದಾರೆ.
ವಿಜಯನಗರ ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವದಂದು ಧ್ವಜಾರೋಹಣದ ಕರ್ತವ್ಯದಿಂದ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತವಾಗಿ ಪತ್ರ ಬರೆದಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರ ನಡೆ ಹಾಗೂ ಮನಸ್ಥಿತಿಯನ್ನು ಸಂಸದರು ತೀವ್ರವಾಗಿ ಟೀಕಿಸಿದರು.
ಪ್ರಸ್ತುತ ಸರ್ಕಾರವು ಮಹಿಳಾ ವಿರೋಧಿ, ಸಂವಿಧಾನ ವಿರೋಧಿ, ಕನ್ನಡ ವಿರೋಧಿ ಹಾಗೂ ರಾಷ್ಟ್ರ ವಿರೋಧಿಯಾಗಿದೆ ಎಂಬುದಕ್ಕೆ ಈ ಎಲ್ಲಾ ಬೆಳವಣಿಗೆಗಳೇ ಸ್ಪಷ್ಟ ನಿದರ್ಶನವಾಗಿದೆ ಎಂದು ಕ್ಯಾ. ಬ್ರಿಜೇಶ್ ಚೌಟ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.