ಕಡಬ: ಸರ್ಕಾರದಲ್ಲಿ ಅನುದಾನದ ಕೊರತೆ ಇದೆ. ಈಗಾಗಲೇ ತಾಪಂ ಮೂಲಕ ಐದೂವರೆ ಲಕ್ಷ ರೂಪಾಯಿ ಅನುದಾನ ನೀಡಿದ್ದು, ಮುಂದಿನ ಡಿಸೆಂಬರ್ ಒಳಗಾಗಿ ಮತ್ತೆ 5 ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಕೊೖಲ ಗ್ರಾಮದ ಕೆ.ಸಿ.ಫಾರ್ಮ್ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಪಂ ಮತ್ತು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಿರ್ಮಾಣವಾಗಲಿರುವ ರಂಗಮಂದಿರ ಮತ್ತು ಭೋಜನ ಶಾಲೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಕೊೖಲ ಗ್ರಾಪಂ ಅಧ್ಯಕ್ಷೆ ಪುಷ್ಪಾ ಸುಭಾಷ್ ಶೆಟ್ಟಿ, ಸದಸ್ಯರಾದ ಹರ್ಷಿತ್ ಕುಮಾರ್, ಸಫೀಯಾ, ಪಿಡಿಒ ಸಂದೇಶ್, ಶತಮಾನೋತ್ಸವ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ, ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ಸುಭಾಷ್ ಶೆಟ್ಟಿ, ಕೊಲ ಗಾಪಂ ಕಾರ್ಯದರ್ಶಿ ಪಮ್ಮು, ಆತೂರು ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೀರಜ್ ಕುಮಾರ್ ರೈ, ಮಾಜಿ ಅಧ್ಯಕ್ಷ ಯದುಶ್ರೀ ಕೊೖಲ ಗ್ರಾಪಂ ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ, ಮಾಜಿ ಸದಸ್ಯ ಸುದೀಶ್ ಪಟ್ಟೆ, ಗ್ಯಾರಂಟಿ ಯೋಜನೆ ಕಡಬ ತಾಲೂಕು ಸಮಿತಿ ಸದಸ್ಯ ಎ.ಕೆ. ಬಶೀರ್, ನಿವೃತ್ತ ಮುಖ್ಯ ಶಿಕ್ಷಕ ಕುಶಾಲಪ್ಪ ಗೌಡ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಅನುಪಮಾ ಸ್ವಾಗತಿಸಿದರು. ಶಿಕ್ಷಕ ಲಂಕೇಶ್ ವಂದಿಸಿದರು.