Crime 
ದಕ್ಷಿಣ ಕನ್ನಡ

ಹದಿನೈದರ ಬಾಲಕಿಗೆ ಸ್ನೇಹಿತೆಯ ತಂದೆ ಕಿರುಕುಳ

ಮಂಜೇಶ್ವರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲು

ಕಾಸರಗೋಡು: ಸ್ನೇಹಿತೆಯನ್ನು ಭೇಟಿಯಾಗಲು ಆಕೆಯ ಮನೆಗೆ ಬಂದಿದ್ದ 15ರ ಹರೆಯದ ಬಾಲಕಿಗೆ ಕಿರುಕುಳ ನೀಡಲೆತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಸ್ನೇಹಿತೆಯ ತಂದೆ ವಿರುದ್ಧ ಮಂಜೇಶ್ವರ ಠಾಣೆ ಪೊಲೀಸರು ಪೋಕ್ಸೋ ಕೇಸು ದಾಖಲಿಸಿಕೊಂಡಿದ್ದಾರೆ. ಸ್ನೇಹಿತೆಯನ್ನು ಭೇಟಿಯಾಗಲು ಬಂದಾಗ ಆಕೆ ಮನೆಯಲ್ಲಿ ಇರಲಿಲ್ಲ. ಈ ವೇಳೆ ಆಕೆಯ ತಂದೆ ಕಿರುಕುಳ ನೀಡಲು ಯತ್ನಿಸಿರುವುದಾಗಿ ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ. ಆರೋಪಿ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದಾರೆ.

ಮನೆ ಸಮೀಪ ಅವಿತಿದ್ದ ಯುವಕ ಸೆರೆ

ಕಾಸರಗೋಡು: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಜತ್ತೂರು ಯತೀಮ್ ಖಾನ ರಸ್ತೆಯ ಅಮಿತ್ ಎಂಬುವರ ಮನೆಯ ಸಮೀಪ ಸಂಶಯಾಸ್ಪದವಾಗಿ ಅವಿತು ಕುಳಿತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಕಿಶನ್‌ಗಂಜ್ ನಿವಾಸಿ ಗೋವಿಂದ್ ಮುರ್ಮು (26) ಬಂಧಿತ. ಅವಿತು ಕುಳಿತಿದ್ದ ಈತ ಸ್ಥಳೀಯರನ್ನು ಕಂಡು ಪರಾರಿಯಾಗಲು ಯತ್ನಿಸಿದ್ದಾನೆ. ಸ್ಥಳೀಯರು ನೀಡಿದ ವಾಹಿತಿಯಂತೆ ಎಸ್‌ಐ ಅರ್ಜುನ್ ಅರವಿಂದ್ ನೇತೃತ್ವದ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಈತ ಕಳವಿಗೆ ಸಂಚು ರೂಪಿಸುತ್ತಿದ್ದನೆನ್ನಲಾಗಿದೆ.

ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಕಾಸರಗೋಡು: ಎಂಟು ವಷರ್ಗಳ ಹಿಂದೆ ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಅಡ್ಕ ವಳಯಂ ರಸ್ತೆಯಲ್ಲಿರುವ ಅಂಗಡಿಯಲ್ಲಿ ನಡೆದಿದ್ದ ಕಳವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬೆಂಗಳೂರು ನಿವಾಸಿ ಮುಹಮ್ಮದ್ ಅಸಾಸ್ ಯಾನೆ ಅಸರ್ (30) ಎಂಬಾತನನ್ನು ಕುಂಬಳೆ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಶಿರಿಯ ಕುನ್ನಿಲ್ ನಿವಾಸಿ ಕೆ.ಮುಹಮ್ಮದ್ ಮುಸ್ಲಿಯಾರ್ ಅವರ ಅಂಗಡಿಯ ಬೀಗ ಒಡೆದು 3 ಸಾವಿರ ರೂ. ನಗದು, ಮೂರು ಮೊಬೈಲ್ ಹಾಗೂ 4 ಸಾವಿರ ರೂ. ಮೌಲ್ಯದ ಸಿಗರೇಟ್ ಸೇರಿದಂತೆ ಹಲವು ಸಾಮಗ್ರಿಗಳನ್ನು ಕಳವು ವಾಡಲಾಗಿತ್ತು. ಪ್ರಕರಣದಲ್ಲಿ ಬಂಧಿತನಾಗಿದ್ದ ಮುಹಮ್ಮದ್ ಅಸಾಸ್ ಜಾಮೀನಿನಲ್ಲಿ ಬಿಡುಗಡೆಯಾದ ಬಳಿಕ ತಲೆಮರೆಸಿಕೊಂಡಿದ್ದನು.

ಬಿಆರ್‌ಡಿಸಿ ಕಚೇರಿಗೆ ವಿಜಿಲೆನ್ಸ್ ದಾಳಿ

ಕಾಸರಗೋಡು: ಬೇಕಲ್ ರೆಸಾರ್ಟ್ ಡೆವಲಪ್‌ಮೆಂಟ್ ಕಾರ್ಪೊರೇಶನ್ (ಬಿಆರ್‌ಡಿಸಿ) ಕಚೇರಿಗೆ ವಿಜಿಲೆನ್ಸ್ ಅಧಿಕಾರಿಗಳು ದಾಳಿ ನಡೆಸಿ ಕಟ್ಟಡ ನಿರ್ವಾಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದರು. ಪಳ್ಳಿಕೆರೆ ಕುಟುಂಬ ಆರೋಗ್ಯ ಕೇಂದ್ರದ ಬಳಿ ಬಿಆರ್‌ಡಿಸಿ ಕಚೇರಿಗಾಗಿ 3 ಸಾವಿರ ಚದರ ಅಡಿ ವಿಸ್ತೀರ್ಣದ ಕಟ್ಟಡ ನಿರ್ವಾಣ ಕಾಮಗಾರಿಯನ್ನು ಸಂಸ್ಥೆಯೊಂದಕ್ಕೆ 3.25 ಕೋಟಿ ರೂ.ಗೆ ಗುತ್ತಿಗೆ ನೀಡಲಾಗಿತ್ತು. 2022 ಅ.8ರಂದು ಅಂದಿನ ಪ್ರವಾಸೋದ್ಯಮ ಮತ್ತು ಲೋಕೋಪಯೋಗಿ ಖಾತೆ ಸಚಿವ ಮೊಹಮ್ಮದ್ ರಿಯಾಸ್ ಕಟ್ಟಡ ನಿರ್ವಾಣಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು. ಕಟ್ಟಡ ನಿರ್ಮಾಣದ ಗುತ್ತಿಗೆ ನೀಡಿರುವ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಲ್ಲಿಸಲಾದ ದೂರಿನ ಹಿನ್ನೆಲೆಯಲ್ಲಿ ಜಾಗೃತ ದಳ ದಿಢೀರ್ ದಾಳಿ ನಡೆಸಿ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿದೆ.