ಮಾರುತಿ ಲಮಾಣಿ  
ದಕ್ಷಿಣ ಕನ್ನಡ

ಹೆಡ್‌ಕಾನ್‌ಸ್ಟೇಬಲ್ ಮಾರುತಿ ಲಮಾಣಿ ನಿಧನ

ಹರೀಶ ಎಂ.
ಮಂಗಳೂರು: ಕದ್ರಿ ಸಂಚಾರ ಪೊಲೀಸ್ ಠಾಣೆಯ ಹೆದ್ದಾರಿ ಗಸ್ತು ವಾಹನ ಚಾಲಕ, ಹೆಡ್ ಕಾನ್‌ಸ್ಟೇಬಲ್ ಮಾರುತಿ ಲಮಾಣಿ (36) ಅಸೌಖ್ಯದಿಂದ ಮಂಗಳವಾರ ನಿಧನ ಹೊಂದಿದ್ದಾರೆ.
ಹಾವೇರಿ ಮೂಲದ ಮಾರುತಿ ಅವರು ಭಾನುವಾರ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸಿ ಬಿಕರ್ನಕಟ್ಟೆಯಲ್ಲಿರುವ ಮನೆಗೆ ತೆರಳಿದ್ದ ಅವರು ಅಸೌಖ್ಯದಿಂದ ಕುಸಿದು ಬಿದ್ದಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಅಧಿಕ ರಕ್ತದೊತ್ತಡದಿಂದ ಮೆದುಳಿನ ರಕ್ತಸ್ರಾವಕ್ಕೊಳಗಾಗಿರುವುದಾಗಿ ವೈದ್ಯರು ತಿಳಿಸಿದ್ದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮೃತರು ಪತ್ನಿ ಕದ್ರಿ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಜಕ್ಕವ್ವ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮಾರುತಿ ಅವರು 2016ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು. ನಗರ ಮೀಸಲು ಶಸಸ್ತ್ರ ಪಡೆಯಲ್ಲಿ ಹೆಚ್ಚಿನ ಅವಧಿಗೆ ಕರ್ತವ್ಯ ನಿರ್ವಹಿಸಿದ್ದರು. ಪೊಲೀಸ್ ಕವಾಯತು ಮೈದಾನದಲ್ಲಿ ಮೃತರಿಗೆ ಇಲಾಖೆಯಿಂದ ಗೌರವ ಸೂಚಿಸಿ, ಪಾರ್ಥೀವ ಶರೀರವನ್ನು ಹುಟ್ಟೂರಿಗೆ ಕೊಂಡೊಯ್ಯಲಾಯಿತು.