ಅಯೋಧ್ಯೆ ಕರಸೇವೆಯಲ್ಲಿ ಪಾಲ್ಗೊಂಡ ಕರಸೇವಕರನ್ನು ಕಲ್ಲಬೆಟ್ಟು ಮಂಡಲ ಹಿಂದೂ ಸಂಗಮದಲ್ಲಿ ಗೌರವಿಸಲಾಯಿತು. ಕೃಷ್ಣಪ್ರಸಾದ್ ಕಾಯರ್ ಕಟ್ಟೆ, ಮಾರೂರು ಖಂಡಿಗದ ರಾಮದಾಸ ಆಸ್ರಣ್ಣ ಮೊದಲಾದವರಿದ್ದರು. 
ದಕ್ಷಿಣ ಕನ್ನಡ

ಜಾತಿ ಭೇದ ತೊರೆದಾಗ ಸಾಮರಸ್ಯ ನಿರ್ಮಾಣ : ಕೃಷ್ಣಪ್ರಸಾದ್ ಕಾಯರ್ ಕಟ್ಟೆ

ಸೌಮ್ಯ ಆರ್
ಹಿಂದೂ ಸಂಗಮ ಆಯೋಜನಾ ಸಮಿತಿ, ಮೂಡುಬಿದಿರೆ ತಾಲೂಕಿನ ಕಲ್ಲಬೆಟ್ಟು ಮಂಡಲದ ವತಿಯಿಂದ ಭಾನುವಾರ ಕಲ್ಲಬೆಟ್ಟು ಮಹಮ್ಮಾಯಿ ದೇವಸ್ಥಾನದ ಆವರಣದಲ್ಲಿ ದಿವಂಗತ ಸಂಜೀವ ಆಚಾರ್ಯ ವೇದಿಕೆಯಲ್ಲಿ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
ಕಲ್ಲಬೆಟ್ಟು ಮಹಮ್ಮಾಯಿ ದೇವಸ್ಥಾನದ ಆಡಳಿತ ಮೊಕ್ತೇಸರ ಶಿವಾನಂದ ಪೈ, ಶಂಭು ಶೆಟ್ಟಿ ಮಾರೂರು ಗುತ್ತು, ಪಾಣರ ಯಾನೆ ನಲಿಕೆ ಸಂಘದ ಜಿಲ್ಲಾಧ್ಯಕ್ಷ ಎನ್.ಕೆ.ಸಾಲ್ಯಾನ್, ಮಹಮ್ಮಾಯಿ ದೇವಸ್ಥಾನದ ಅಧ್ಯಕ್ಷ ಸುಂದರ ಶೆಟ್ಟಿ, ಗೋಪಾಲ ಪೂಜಾರಿ, ಪತ್ರಕರ್ತೆ ಪ್ರೇಮಶ್ರೀ ಕಲ್ಲಬೆಟ್ಟು, ಹಿಂದೂ ಸಂಗಮ ಸಮಿತಿಯ ಸಂಚಾಲಕ ನವೀನ್ ಕುಮಾರ್, ಸಹ ಸಂಚಾಲಕ ಪ್ರವೀಣ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ವಿವಿಧ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಿತಿಯ ಕೋಶಾಧಿಕಾರಿ ಗೋಪಾಲಕೃಷ್ಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನಘಾ ಕಾಮತ್ ವಂದೇ ಮಾತರಂ ಹಾಡಿದರು. ಶೋಭಾ ಸುರೇಶ್ ಹಾಗೂ ತುಷಿತಾ ಕಾರ್ಯಕ್ರಮ ನಿರೂಪಿಸಿದರು. ಸುಧೀರ್ ಪೈ ವಂದಿಸಿದರು.