ಸುಳ್ಯ ತಾಲೂಕಿನ ಉಬರಡ್ಕದಲ್ಲಿ ಮಾಸ್ ಅಡಕೆ ಖರೀದಿ ಕೇಂದ್ರವನ್ನು ಮಾಸ್ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಉದ್ಘಾಟಿಸಿದರು.
ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆ ಅಧ್ಯಕ್ಷತೆ ವಹಿಸಿದ್ದರು.
ಉಬರಡ್ಕ ಮಿತ್ತೂರು ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮಾ, ಶ್ರೀ ವೆಂಕಟರಮಣ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ಸ್ಥಾಪಕಾಧ್ಯಕ್ಷ ಪಿ.ಸಿ.ಜಯರಾಮ, ಮಾಸ್ ಸಂಸ್ಥೆ ನಿರ್ದೇಶಕ ನಿತ್ಯಾನಂದ ಮುಂಡೋಡಿ, ಉಬರಡ್ಕ ನರಸಿಂಹ ದೇವಸ್ಥಾನದ ಮೊಕ್ತೇಸರರಾದ ಜತ್ತಪ್ಪ ಗೌಡ, ಉಬರಡ್ಕ- ಮಿತ್ತೂರು ಜೋಡು ದೈವಗಳ ದೈವಸ್ಥಾನ ಅಧ್ಯಕ್ಷ ವೆಂಕಟ್ರಮಣ ಕೆದಂಬಾಡಿ, ಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ರವೀಂದ್ರ, ಡಿಸಿಸಿ ಬ್ಯಾಂಕ್ ವಲಯ ಮೇಲ್ವಿಚಾರಕ ರತನ್, ಸಿಇಒ ಜಯಪ್ರಕಾಶ್ ಯು., ಮಾಸ್‌ನ ಮುಖ್ಯ ಮಾರುಕಟ್ಟೆ ಅಧಿಕಾರಿ ಕೆ.ಎಂ.ಲೋಕೇಶ್ ಮತ್ತಿತರರಿದ್ದರು.
ಅಡಕೆ ಕೃಷಿಕರ ಹಿತ ಕಾಪಾಡುವ ಹಿತದೃಷ್ಟಿಯಿಂದ 2001ರಲ್ಲಿ ಮಾಸ್ ಸಂಸ್ಥೆ ಆರಂಭಗೊಂಡಿತು. 24 ವರ್ಷಗಳಲ್ಲಿ ಅತ್ಯುತ್ತಮ ಸೇವೆ ನೀಡಿದ್ದು, ಮಾಸ್‌ನ 12ನೇ ಅಡಕೆ ಖರೀದಿ ಕೇಂದ್ರ ಇಲ್ಲಿ ಉದ್ಘಾಟನೆಯಾಗಿದೆ. ಸುಳ್ಯದಲ್ಲಿ ಸುಸಜ್ಜಿತ ಅಡಕೆ ಸಂಸ್ಕರಣಾ ಘಟಕ ಕಾರ್ಯಾಚರಿಸುತ್ತಿದೆ.
ಸಾಧಕರಿಗೆ ಗೌರವಾರ್ಪಣೆ