ವಿಜಯವಾಣಿ ಸುದ್ದಿಜಾಲ ಬಂಟ್ವಾಳ
ಕಬಡ್ಡಿ ಪಂದ್ಯಾಟ ಆಯೋಜಿಸುತ್ತಿರುವ ಮೂಲಕ 40 ವರ್ಷಗಳಿಂದ ಗ್ರಾಮೀಣ ಕ್ರೀಡಾಸಕ್ತರಿಗೆ ಪ್ರೋತ್ಸಾಹ ನೀಡುವುದರ ಜತೆಗೆ ಸಮಾಜಕ್ಕೆ ಉತ್ತಮ ಕ್ರೀಡಾಪಟುಗಳನ್ನು ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನೀಡುತ್ತಿರುವುದು ಶ್ಲಾಘನಾರ್ಹ ಎಂದು ಜಿಲ್ಲಾ ಅಡಕೆ ಮತ್ತು ಕೃಷಿ ಉತ್ಪನ್ನ ವರ್ತಕರ ಸಂಘದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಮೂಡಾಯೂರು ಮೆಚ್ಚುಗೆ ಸೂಚಿಸಿದರು.
ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಶನಿವಾರ ಆರಂಭಗೊಂಡ 41ನೇ ವರ್ಷದ ಅಂತಾರಾಜ್ಯಮಟ್ಟದ ಪುರುಷರ 55 ಕೆ.ಜಿ. ಮತ್ತು 65 ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸ್ಯಾಕ್ಸೋಫೋನ್ ಮಾದಕ ಕೆ.ಬಾಬು ಸಪಲ್ಯ ವಗ್ಗ ಅವರಿಗೆ ಪ್ರಶಸ್ತಿ ಪ್ರದಾನಿಸಲಾಯಿತು. ಸ್ವಸ್ತಿಕ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಜತೆ ಕಾರ್ಯದರ್ಶಿ ಫ್ರಾನ್ಸಿಸ್ ವಿ.ವಿ., ಪಿಲಾತಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಶಾರದಾ, ಹರ್ಷಿಣಿ ಪುಷ್ಪಾನಂದ, ಕಜೆಕಾರು ಗ್ರಾ.ಪಂ. ಅಧ್ಯಕ್ಷ ದೇವದಾಸ್ ಅಬುರ, ವಾಮದಪದವು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಪಿಲಿಂಗಾಲು, ಪಟ್ಲ ಫೌಂಡೇಶನ್ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ಅಬ್ದುಲ್ ಶುಕೂರ್ ಕುದ್ರೊಟ್ಟು, ಪ್ರಶಾಂತ್ ಎಂ.ಪಾರೆಂಕಿ, ಸಂತೋಷ್ ಕುಮಾರ್, ಅಬೀಬ್ ಮಾಣಿ ಶುಭಹಾರೈಸಿದರು.
ಎಎಸ್‌ಐ ಚಿದಾನಂದ ರೈ, ಫೆಲಿಕ್ಸ್ ಗಡಿಯಾರ್, ರಾಜೇಶ್ ಪಿ.ಪುಂಜಾಲಕಟ್ಟೆ, ಅಬ್ದುಲ್ ಹಮೀದ್ ಮಲ್ಪೆ, ಮಾಧವ ಬಂಗೇರ, ರಾಜೇಶ್ ಪುಳಿಮಜಲು ಮತ್ತಿತರರಿದ್ದರು. ಪ್ರಭಾಕರ ಪಿ.ಎಂ. ಸ್ವಾಗತಿಸಿದರು. ಅಬ್ದುಲ್ ಪಿ. ವಂದಿಸಿದರು. ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗ ಸಹಿತ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕುಮಟ್ಟದ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ ನಡೆಯಿತು.