ಇತ್ತೆ ಬರ್ಪೆ ಅಬೂಬಕ್ಕರ್ 
ದಕ್ಷಿಣ ಕನ್ನಡ

ಇತ್ತೆ ಬರ್ಪೆ ಅಬೂಬಕ್ಕರ್ ಅಂದರ್ : ಕುತ್ಲೂರಿನ ಶಿಕ್ಷಕರ ಮನೆಯಲ್ಲಿ ಕಳವು ಪ್ರಕರಣ

ಸೌಮ್ಯ ಆರ್
ಕುತ್ಲೂರಿನ ಮಂಜುಶ್ರೀ ನಗರದ ಶಿಕ್ಷಕ ಅವಿನಾಶ್ ಮನೆಯಲ್ಲಿ ಅಕ್ಟೋಬರ್ ಮೊದಲ ವಾರದಲ್ಲಿ ಮನೆಯಲ್ಲಿ 9.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ.11ರಂದು ರಾತ್ರಿ ವೇಣೂರು ಕುಂಭಶ್ರೀ ಬಳಿ ಪೊಲೀಸರ ತಂಡ ವಾಹನ ತಪಾಸಣೆ ಮಾಡುವ ವೇಳೆ ಅನುಮಾನಾಸ್ಪದವಾಗಿ ಬರುತ್ತಿದ್ದ ಸ್ಕೂಟರನ್ನು ತಡೆದು ದಾಖಲೆ ಪರಿಶೀಲನೆ ನಡೆಸಿದ ವೇಳೆ ಸ್ಕೂಟರ್ ಅನ್ನು ಮಂಗಳೂರಿನಿಂದ ಕಳವುಗೈದಿರುವುದು ಬೆಳಕಿಗೆ ಬಂದಿದೆ. ಆರೋಪಿ ಅಬೂಬಕ್ಕರ್‌ನನ್ನು ವೇಣೂರು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದಾಗ ಕುತ್ಲೂರಿನ ಅವಿನಾಶ್ ಮನೆಯಲ್ಲಿ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.