ಕಳ್ಳಿಗೆ ಗ್ರಾಪಂ ಕಚೇರಿಯಲ್ಲಿ ಜಲ್ ಅರ್ಪಣ್ ದಿವಸ್ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ಉದ್ಘಾಟಿಸಿದರು. ಕಳ್ಳಿಗೆ ಗ್ರಾಪಂ ಅಧ್ಯಕ್ಷ ಪುರುಷೋತ್ತಮ ಕೊಟ್ಟಾರಿ ಮಾಡಂಗೆ, ಬಂಟ್ವಾಳ ತಾಪಂ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಮೊದಲಾದವರಿದ್ದರು. 
ದಕ್ಷಿಣ ಕನ್ನಡ

ಜೀವಜಲ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ : ರಾಜೇಶ್ ನೖಾಕ್

ಸೌಮ್ಯ ಆರ್
ಜೀವಜಲ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. 1.80 ಕೋಟಿ ರೂ. ಅನುದಾನದಲ್ಲಿ ಕಳ್ಳಿಗೆ ಗ್ರಾಮದಲ್ಲಿ ಈ ಯೋಜನೆಯನ್ನು ಯಶಸ್ವಿಯಾಗಿ ಪೂರೈಸಲಾಗಿದೆ. ಗ್ರಾಮೀಣ ಭಾಗದ ಪ್ರತಿ ಮನೆಗೂ ನಿರಂತರ ಕುಡಿಯುವ ನೀರು ಪೂರೈಸುವುದು ಯೋಜನೆ ಉದ್ದೇಶವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಉಳಿಪ್ಪಾಡಿ ಹೇಳಿದರು.
ಕೇಂದ್ರ ಸರ್ಕಾರದ ಜಲ್ ಜೀವನ್ ಮಿಷನ್ ಯೋಜನೆಯಡಿ ಕಳ್ಳಿಗೆ ಗ್ರಾಮಕ್ಕೆ 24/7 ಕುಡಿಯುವ ನೀರು ಪೂರೈಕೆ ಉದ್ದೇಶದಿಂದ ಮಂಗಳವಾರ ಕಳ್ಳಿಗೆ ಗ್ರಾಪಂ ಕಚೇರಿಯಲ್ಲಿ ಜಲ್ ಅರ್ಪಣ್ ದಿವಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.