ಮೂಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪದ ಪಾವಂಜೆ ಜಂಕ್ಷನ್ ಬಳಿ ಕಂಟೈನರ್ ಮತ್ತು ಜೀಪ್ ಡಿಕ್ಕಿಯಾಗಿ ಜೀಪ್ನಿಲ್ಲಿದ್ದ 6 ಮಂದಿ ಪಾರಾಗಿದ್ದಾರೆ. ಹಳೆಯಂಗಡಿ ಕಡೆಯಿಂದ ಸುರತ್ಕಲ್ ಕಡೆಗೆ ವಿಶೇಷಚೇತನ ಮಕ್ಕಳನ್ನು ಶಾಲೆಗೆ ಕೊಂಡೊಯ್ಯುತ್ತಿದ್ದ ಜೀಪು ಪಾವಂಜೆ ಜಂಕ್ಷನ್ನಲ್ಲಿ ಅಪಘಾತ ತಡೆಗೆ ಇರಿಸಿದ್ದ ಬ್ಯಾರಿಕೇಡ್ ಬಳಿ ಎದುರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಂಟೈನರನ್ನು ಎಡಬದಿಯಿಂದ ಓವರ್ ಟೇಕ್ ಮಾಡುವ ರಭಸದಲ್ಲಿ ನುಗ್ಗಿಸಿದಾಗ ಕಂಟೈನರ್ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಕೆಲ ಹೊತ್ತು ಹೆದ್ದಾರಿ ಸಂಚಾರ ವ್ಯತ್ಯಯ ಉಂಟಾಗಿದ್ದು, ಕೂಡಲೇ ಸ್ಥಳೀಯ ಆಟೋ ಚಾಲಕರು, ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಅಪಘಾತಕ್ಕೀಡಾದ ಎರಡು ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಿದರು.