ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ತಂತ್ರಿವರ್ಯರಾದ ನಡಿಬೈಲು ಶಂಕರ್ ಭಟ್ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆ ನಡೆಯಿತು. 
ದಕ್ಷಿಣ ಕನ್ನಡ

ಸತ್ಕಾರ್ಯಗಳಿಗೆ ಪ್ರತಿಫಲ ಶತಃಸಿದ್ಧ KANIYOORU

ಪ್ರಮುಖ ಮುಖ್ಯಾಂಶಗಳು

  • ಶ್ರೀ ಮಹಾಬಲೇಶ್ವರ ಸರಸ್ವತಿ ಸ್ವಾಮೀಜಿ ಸಂದೇಶ
ವಿಟ್ಲ: ದೇವರಿಗೆ ಭಕ್ತಿಯಿಂದ ಸಮರ್ಪಿಸುವ ಸೇವೆಗೆ, ಜೀವನದಲ್ಲಿ ಮಾಡುವ ಪ್ರತಿಯೊಂದು ಉತ್ತಮ ಕಾರ್ಯಗಳಿಗೆ ಪ್ರತಿಫಲ ಸಿಗುತ್ತದೆ. ವರಮಹಾಲಕ್ಷ್ಮೀ ವ್ರ ಪ್ರತಿ ಕುಟುಂಬಗಳಿಗೂ ಸದ್ಭಾವನೆ, ಆರೋಗ್ಯ, ಸಂಪತ್ತು, ಸಕಲ ಸನ್ಮಂಗಳ ನೀಡಲಿ ಎಂದು ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸರಸ್ವತಿ ಸ್ವಾಮೀಜಿ ಹೇಳಿದರು. 
ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಕಾರ್ಯಕ್ರಮದಲ್ಲಿ ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು. 
ಶ್ರೀ ಕ್ಷೇತ್ರದ ತಂತ್ರಿವರ್ಯರಾದ ನಡಿಬೈಲು ಶಂಕರ್ ಭಟ್ ನೇತೃತ್ವದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು. ಶ್ರೀ ಚಾಮುಂಡೇಶ್ವರಿ ದೇವಿ ಟ್ರಸ್ಟ್ ಅಧ್ಯಕ್ಷ ಪದ್ಮನಾಭ ಪೂಜಾರಿ ಅಳಿಕೆ, ಶ್ರೀ ಮಾತಾ ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ಸುಜಾತಾ ಉಪಸ್ಥಿತರಿದ್ದರು. ಚಂದ್ರಶೇಖರ್ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.