ಕಾವು ಸರ್ಕಾರಿ ಶಾಲೆಯಲ್ಲಿ ಶಾಸಕ ಅಶೋಕ್ ರೈ ವಿವಿಧ ಕಾಮಗಾರಿಗಳ ಉದ್ಘಾಟಿಸಿದರು. ಕಾವು ಹೇಮನಾಥ ಶೆಟ್ಟಿ, ನನ್ಯ ಅಚ್ಚುತ ಮೂಡೆತ್ತಾಯ, ಶ್ರೀರಾಮ ಪಕ್ಕಳ ಮತ್ತಿತರರು ಇದ್ದರು. 
ದಕ್ಷಿಣ ಕನ್ನಡ

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ : ಅಶೋಕ್ ರೈ

ಸೌಮ್ಯ ಆರ್
ಕಾವು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮ, ವಿವಿಧ ಕಾಮಗಾರಿ ಉದ್ಘಾಟಿಸಿ ಮಾತನಾಡಿದರು.
ಕಾವು ಸರ್ಕಾರಿ ಶಾಲೆಯನ್ನು ದತ್ತು ಪಡೆದಿರುವ ಕಾವು ಹೇಮನಾಥ ಶೆಟ್ಟಿ, ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ನನ್ಯ ಅಚ್ಚುತ್ತ ಮೂಡೆತ್ತಾಯ, ಕೃಷಿಕ ದಂಬೆಕಾನ ಸದಾಶಿವ ರೈ, ಎಂಆರ್‌ಪಿಎಲ್ ಸಂಸ್ಥೆ ಪವರ್ ಪ್ಲಾಂಟ್ ವಿಭಾಗದ ಮ್ಯಾನೇಜರ್ ಹರೀಶ್ ಶೆಟ್ಟಿ ಮಾತನಾಡಿದರು.
ದ.ಕ. ಹಾಲು ಉತ್ಪಾದಕರ ಒಕ್ಕೂಟ ನಿರ್ದೇಶಕ ಕೆ.ಚಂದ್ರಶೇಖರ್ ರಾವ್, ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ನೆಟ್ಟಣಿಗೆ ಮುಡ್ನೂರು ಸರ್ಕಾರಿ ಪ್ರೌಢಶಾಲೆ ಕಾರ್ಯಾಧ್ಯಕ್ಷ ಶ್ರೀರಾಮ ಪಕ್ಕಳ, ಎಸ್‌ಡಿಎಂಸಿ ಅಧ್ಯಕ್ಷ ತಾರಾನಾಥ್, ಲಯನ್ಸ್ ಕ್ಲಬ್ ಪಾವನರಾಮ ಮತ್ತಿತರರು ಉಪಸ್ಥಿತರಿದ್ದರು.

ಶಾಲೆಯಲ್ಲಿ ಪ್ರತೀ ವರ್ಷ ಮಕ್ಕಳ ದಾಖಲಾತಿ ಹೆಚ್ಚಾಗುತ್ತಿದೆ. ಮಕ್ಕಳು ಆಂಗ್ಲ ಮಾಧ್ಯಮ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಏಕೈಕ ಉದ್ದೇಶದಿಂದ ಶಾಲೆಯಲ್ಲಿ ಸರ್ಕಾರದ ಅನುಮತಿಗಾಗಿ ಕಾಯದೆ ಆಂಗ್ಲ ಮಾಧ್ಯಮ ತರಗತಿ ಆರಂಭಿಸಿರುವುದು. ಮಕ್ಕಳನ್ನು ಕರೆ ತರಲು ಬಸ್ ವ್ಯವಸ್ಥೆ ಮಾಡಿರುವುದು ತಾಲೂಕಿನಲ್ಲೇ ಪ್ರಥಮ ಪ್ರಯೋಗವಾಗಿದೆ. ಶಾಲೆಯನ್ನು ಕೆಪಿಎಸ್ ಮಾಡಬೇಕೆಂಬುವುದು ನಮ್ಮ ಬೇಡಿಕೆ.