ಕಾಜೂರು ದರ್ಗಾ ಶರೀಫ್‌ನ್ನು ಉರುಸ್ ಅಂಗವಾಗಿ ವಿದ್ಯುತ್ ದೀಪಗಳಿಂದ ಅಲಂಕರಿಸಿರುವುದು. 
ದಕ್ಷಿಣ ಕನ್ನಡ

ಕಾಜೂರು ದರ್ಗಾ ಶರೀಫ್‌ನಲ್ಲಿ ಉಪನ್ಯಾಸ ಮಾಲಿಕೆ

ಜ.21ರಂದು ಪೆರ್ಮುಗಂ ಅಶ್ರಫ್ ಉಸ್ತಾದ್ ನೇತೃತ್ವದಲ್ಲಿ ಇಸ್ಲಾಮಿಕ್ ಕಥಾಪ್ರಸಂಗ ನಡೆಸಿಕೊಡಲಿದ್ದಾರೆ. ದ್ಸಿಕ್ರ್ ಮಜ್ಲಿಸ್, ಪದವಿ ಪ್ರದಾನ, ಉರುಸ್ ಸಮಾರೋಪ ನಡೆಯಲಿದೆ. ಉರುಸ್ ಅಂಗವಾಗಿ ನಡೆಯುವ ಕಾರ್ಯಕ್ರಮಗಳ ಪೈಕಿ ಇನ್ನು 4 ದಿನಗಳು ಮಾತ್ರ ಬಾಕಿಯಿದ್ದು, 22ರಂದು ‘ದ್ಸಿಕ್ರ್ ಮಜ್ಲಿಸ್’ ಬಾಯಾರ್ ತಂಳ್ ನೇತೃತ್ವದಲ್ಲಿ ನಡೆಯಲಿದೆ.
ಡಾ.ಕಾವಳಕಟ್ಟೆ ಹಝ್ರತ್ ಸಹಿತ ಉಲಮಾ ಪ್ರಮುಖರು ಭಾಗವಹಿಸಲಿದ್ದಾರೆ. 23ರಂದು ಕಾಜೂರು ಮಹಿಳಾ ಶರೀಅತ್ ಕಾಲೇಜು ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ ನಡೆಯಲಿದೆ. 25ರಂದು ಬೆಳಗ್ಗೆ ಉರುಸ್ ಸಮಾರಂಭ ನಡೆಯಲಿದ್ದು, ಸಯ್ಯಿದ್ ಕುಂಬೋಳ್ ತಂಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ ಸಮಾರೋಪ ಸಮಾರಂಭಕ್ಕೆ ಸುಲ್ತಾನುಲ್ ಉಲಮಾ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ.ಉಸ್ತಾದ್ ನೇತೃತ್ವ ನೀಡಲಿದ್ದಾರೆ.
ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ವಕ್ಫ್ ಸಚಿವ ಬಿ.ಜಡ್.ಜಮೀರ್ ಅಹಮ್ಮದ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮೌಲಾನಾ ಶಾಫಿ ಸಅದಿ, ಅಜೀಜ್ ದಾರಿಮಿ ಚೊಕ್ಕಬೆಟ್ಟು, ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಮೆಸ್ಕಾಂ ನಿಗಮಾಧ್ಯಕ್ಷ ಕೆ.ಹರೀಶ್ ಕುಮಾರ್ ಭಾಗವಹಿಸಲಿದ್ದಾರೆ. ಕೊನೆಯ ದಿನ ಅನ್ನದಾನ ನಡೆಯಲಿದೆ.